ಬೆಂಗಳೂರು: ‘ಧರ್ಮಸ್ಥಳ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಪ್ರಕರಣದ ವಿಚಾರದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರು ಪರಮೇಶ್ವರ ಅವರನ್ನು, ವಿಧಾನಸೌಧದ ಅವರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿದ್ದರು. ದೀರ್ಘ ಚರ್ಚೆಯ ನಂತರ ಮೊಹಾಂತಿ ಅವರು ಅಲ್ಲಿಂದ ತೆರಳಿದರು.

ಆನಂತರ ಸುದ್ದಿಗಾರರ ಜತೆ ಮಾತನಾಡಿದ ಪರಮೇಶ್ವರ, ‘ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಆದರೆ, ಕೆಲವರು ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಜತೆಗೆ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕುತ್ತಿದ್ದಾರೆ. ಇದರಿಂದ ಶಾಂತಿ ಕದಡುವ ಅಪಾಯವಿದೆ’ ಎಂದರು.

‘ದ್ವೇಷ ಉದ್ದೀಪಿಸುವಂತಹ ಪೋಸ್ಟ್ಗಳನ್ನು ಮಾಡುವವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಸುಳ್ಳು ಸುದ್ದಿ, ಊಹಾಪೋಹ ವರದಿ ಮತ್ತು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಗೃಹ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಲಿದ್ದಾರೆ’ ಎಂದರು.

‘ಪ್ರಣಬ್ ಮೊಹಾಂತಿ ಅವರನ್ನು ಕೇಂದ್ರ ಸೇವೆಗೆ ಕಳುಹಿಸಿ ಎಂದು ಕೇಂದ್ರ ಸರ್ಕಾರವು ಪತ್ರ ಬರೆದಿಲ್ಲ. ಬದಲಿಗೆ ಕೇಂದ್ರ ಸೇವೆಯ ಅರ್ಹರ ಪಟ್ಟಿಯಲ್ಲಿ ಅವರನ್ನು ಸೇರಿಸಿದೆಯಷ್ಟೆ. ಹೀಗಾಗಿ ಎಸ್ಐಟಿ ಮುಖ್ಯಸ್ಥರನ್ನು ಬದಲಿಸುವ ಪ್ರಶ್ನೆ ಈಗ ಇಲ್ಲ. ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಲಷ್ಟೇ ಅವರು ಬಂದಿದ್ದರು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಹೀಗಾಗಿ ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ಎಸ್ಐಟಿ ವರದಿ ಸಲ್ಲಿಸಿದ ನಂತರ ಹೇಳುತ್ತೇನೆ
ಜಿ.ಪರಮೇಶ್ವರ ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.