ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಕಲಿ ನೋಟು: ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್‌

Published : 18 ಸೆಪ್ಟೆಂಬರ್ 2024, 16:14 IST
Last Updated : 18 ಸೆಪ್ಟೆಂಬರ್ 2024, 16:14 IST
ಫಾಲೋ ಮಾಡಿ
Comments

ಬೆಂಗಳೂರು: ಹದಿನಾಲ್ಕು ವರ್ಷಗಳ ಹಿಂದೆ ₹500 ಮುಖಬೆಲೆಯ ನಕಲಿ ನೋಟುಗಳ ಚಲಾವಣೆಗೆ ಯತ್ನಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ ಸೆಷನ್ಸ್‌ ನ್ಯಾಯಾಲಯ ವಿಧಿಸಿದ್ದ 5 ವರ್ಷಗಳ ಜೈಲು ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಶಿಕ್ಷೆ ರದ್ದು ಕೋರಿ ಮೈಸೂರಿನ ಟಿ.ಎನ್.ಕುಮಾರ (31) ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ ಅವರಿದ್ದ ಏಕಸದಸ್ಯ ನ್ಯಾಯಪೀಠ ತಿರಸ್ಕರಿಸಿದೆ.

ಪ್ರಕರಣವೇನು?: ಟಿ.ಎನ್.ಕುಮಾರ ಅವರನ್ನು ಲಕ್ಷ್ಮೀಪುರ ಠಾಣೆ ಪೊಲೀಸರು ಮೈಸೂರಿನ ಎಂಜಿನಿಯರಿಂಗ್ ಸಂಸ್ಥೆಯ ಬಳಿ 2010ರ ಮಾರ್ಚ್ 3ರಂದು ಬಂಧಿಸಿದ್ದರು. ಒಂದೇ ಸರಣಿ ಸಂಖ್ಯೆಯನ್ನು (2ಬಿಇ901745) ಹೊಂದಿದ್ದ ₹500 ಮುಖಬೆಲೆಯ 30 ನಕಲಿ ನೋಟುಗಳನ್ನು ಅವರಿಂದ ವಶಪಡಿಸಿಕೊಂಡಿದ್ದರು.

ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ–1860ರ ಕಲಂ 489 ಸಿ (ಖೋಟಾ ಅಥವಾ ನಕಲಿ ನೋಟುಗಳನ್ನು ಹೊಂದಿದ) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು, ವಿಚಾರಣಾ‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಮೈಸೂರು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ 2013ರ ಜನವರಿ 3ರಂದು 5 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT