ಬೆಂಗಳೂರು: ರಾಜ್ಯದಲ್ಲಿನ ಎಲ್ಲ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಗ್ರೂಪ್ ‘ಡಿ’ ನೌಕರರನ್ನು ನೇಮಿಸಿಕೊಳ್ಳುವಂತೆ ಹೊರಡಿಸಿರುವ ಆದೇಶ ನಕಲಿ ಎಂದು ಶಾಲಾ ಶಿಕ್ಷಣ ಇಲಾಖೆ ಹೇಳಿದೆ.

ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಸೂಚನೆಯಂತೆ ರಾಜ್ಯ ಎಲ್ಲ ಶಾಲಾ–ಕಾಲೇಜುಗಳಲ್ಲೂ ಅಗತ್ಯವಿರುವ ಗ್ರೂಪ್ ‘ಡಿ’ ನೌಕರರನ್ನು ಕಿಯೋನಿಕ್ಸ್ ಮೂಲಕ ನೇಮಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರು ಹೊರಡಿಸಿದ್ದ ಆದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆದೇಶದ ಪ್ರತಿಯಲ್ಲಿ ‘ಈ ಕಚೇರಿ ಟಿಪ್ಪಣಿ ಮಾನ್ಯ ಆಯುಕ್ತರಿಂದ ಅನುಮೋದಿಸಲ್ಪಟ್ಟಿದೆ’ ಎಂಬ ಅಡಿ ಬರಹವೂ ಇದೆ.

ನಕಲಿ ಆದೇಶ ಕುರಿತು ಲಿಖಿತ ಹೇಳಿಕೆ ಬಿಡುಗಡೆ ಮಾಡಿರುವ ಶಾಲಾ ಶಿಕ್ಷಣ ಇಲಾಖೆ, ‘ನಕಲಿ ಆದೇಶದ ಅನ್ವಯ ಯಾವುದೇ ಜಿಲ್ಲೆಯಲ್ಲಿ ಗ್ರೂಪ್ ‘ಡಿ’ ನೌಕರರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದರೆ ತಕ್ಷಣ ಹಿಂಪಡೆಯಬೇಕು. ಈ ಕುರಿತು ಅನುಪಾಲನಾ ವರದಿಯನ್ನು ಸಲ್ಲಿಸಬೇಕು’ ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.