ಮಂಡ್ಯ: ‘ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತವಾಗಿದೆ. ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಟಿ.ಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಾಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದು ಇದು ರೈತರ ಬದುಕಿನ ಆಶಾಭಾವನೆಗೆ ಧಕ್ಕೆ ತಂದಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೆಆರ್‌ಎಸ್ ಅಣೆಕಟ್ಟೆ ವಿಚಾರದಲ್ಲೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಕೆಆರ್‌ಎಸ್ ಡ್ಯಾಂ ಕಟ್ಟುವಾಗ ‘ಸ್ಟಾಪ್ ಲಾಕ್ ಗೇಟ್’ ಇಲ್ಲದ ಕಾರಣ ಅದನ್ನು ಅಳವಡಿಸಿಲ್ಲ. ತುಂಗಭದ್ರಾ ಪರಿಸ್ಥಿತಿ ಗಮನಿಸಿದರೆ, ದೂರ ದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಗೇಟ್ ಹಾಕಬೇಕು ಎಂದು ಒತ್ತಾಯಿಸಿದರು.