ಬೆಂಗಳೂರು: ಗುವಾಹಟಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿಗೆ ಶುಕ್ರವಾರ ರಾಜ್ಯ ವಕೀಲರ ಪರಿಷತ್ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಪರಿಷತ್ ಕಾರ್ಯಾಧ್ಯಕ್ಷ ವೈ.ಆರ್.ಸದಾಶಿವ ರೆಡ್ಡಿ ಮಾತನಾಡಿ, ‘ಶಾಂತ ಸ್ವಭಾವದ, ಹಿರಿ–ಕಿರಿಯ ವಕೀಲರ ಪ್ರೀತಿಗೆ ಪಾತ್ರರಾದ ಬೋಪಣ್ಣ ಅವರ ಪದೋನ್ನತಿ ರಾಜ್ಯಕ್ಕೆ ಸಂದಿರುವ ಗೌರವ’ ಎಂದು ಬಣ್ಣಿಸಿದರು.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಸೇರಿದಂತೆ ಎಲ್ಲ ನ್ಯಾಯಮೂರ್ತಿಗಳು ಹಾಜರಿದ್ದರು.

ಬೋಪಣ್ಣ ವರ್ಗಾವಾಣೆಯಿಂದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಈಗ 28ಕ್ಕೆ ಇಳಿದಿದೆ.

ಬೋಪಣ್ಣ ಅವರು 2006ರ ಜನವರಿ 6ರಿಂದ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.