ನವದೆಹಲಿ: ಬೆಲೆ ಕುಸಿತದಿಂದಾಗಿ ಕರ್ನಾಟಕದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ರೈತರ ನೆರವಿಗೆ ಧಾವಿಸಬೇಕಿದ್ದ ಕಾಂಗ್ರೆಸ್ ಸರ್ಕಾರದಲ್ಲಿ ಕುರ್ಚಿ ಕಾದಾಟದಲ್ಲಿ ತೊಡಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದರು.

ರಾಜ್ಯಸಭೆಯಲ್ಲಿ ಮಂಗಳವಾರ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಮಾರುಕಟ್ಟೆಯಲ್ಲಿ ಬೆಲೆ ಕುಸಿದಾಗ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡಬೇಕು. ರಾಜ್ಯ ಸರ್ಕಾರಗಳು ಖರೀದಿ ಕೇಂದ್ರಗಳನ್ನು ತೆರೆದು ಬೆಳೆ ಖರೀದಿಸಬೇಕು. ಕರ್ನಾಟಕದಲ್ಲಿ ಮೆಕ್ಕೆಜೋಳ ಸೇರಿ 48 ಲಕ್ಷ ಹೆಕ್ಟೇರ್ ನಲ್ಲಿ ಬೇರೆ ಬೇರೆ ಬೆಳೆ ಬೆಳೆಯಲಾಗಿದೆ. ಮುಂಗಾರು ಅವಧಿಯಲ್ಲಿ ಪ್ರವಾಹದಿಂದ 14 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿದೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ನೆರವಿಗೆ ಬರಬೇಕಿತ್ತು‘ ಎಂದರು.

ಸರಿಯಾದ ಸಮಯಕ್ಕೆ ಬೆಳೆ ಖರೀದಿ ಮಾಡದ ಹಿನ್ನೆಲೆಯಲ್ಲಿ ಕಡಿಮೆ ಬೆಲೆ ಮಾರಾಟ ಮಾಡಬೇಕಾದ ಅನಿವಾರ್ಯ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. ಕನಿಷ್ಠ ಹಿಂಗಾರು ಬೆಳೆಗಳನ್ನು ಕೇಂದ್ರ ಸರ್ಕಾರ ತನ್ನ ಸಂಸ್ಥೆಗಳ ಮೂಲಕ ಖರೀದಿ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.