ಬೆಂಗಳೂರು: ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಬಂದ್ಅನ್ನು ಕರ್ನಾಟಕದಲ್ಲೂ ಯಶಸ್ವಿಗೊಳಿಸಲು ರೈತ ಸಂಘಟನೆಗಳು ಸಜ್ಜಾಗಿವೆ.

ಬೆಂಗಳೂರಿನಲ್ಲಿ ಪ್ರಯಾಣಕ್ಕಾಗಲಿ, ನಿತ್ಯದ ವಹಿವಾಟಿಗಾಗಲಿ ಬಂದ್ನಿಂದ ತೊಂದರೆಯಾಗಲಿಕ್ಕಿಲ್ಲ. ಆದರೆ, ರೈತ ಸಂಘಟನೆಗಳು ಪ್ರಬಲವಾಗಿರುವ ಜಿಲ್ಲೆ ಮತ್ತು ನಗರ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಹಾಗೂ ವ್ಯಾಪಾರ ಚಟುವಟಿಕೆಗೆ ಅಡಚಣೆಯಾಗಬಹುದು ಎಂದು ಹೇಳಲಾಗುತ್ತಿದೆ.

‘ಸೋಮವಾರ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಬಂದ್ ನಡೆಯಲಿದ್ದು, ಬಸ್, ರೈಲು ಸಂಚಾರ ತಡೆಯಲಾಗುವುದು. ಹೆದ್ದಾರಿಗಳನ್ನೂ ಬಂದ್ ಮಾಡಲಾಗುವುದು’ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

‘ರಾಜ್ಯ ವ್ಯಾಪಿ ರೈತ ಸಂಘಟನೆಗಳು, ಕಾರ್ಮಿಕ, ದಲಿತ ಮತ್ತು ವಿದ್ಯಾರ್ಥಿ ಸಂಘಟನೆಗಳು, ವರ್ತಕರು, ಕನ್ನಡ ಸಂಘಟನೆಗಳು, ಆಟೋರಿಕ್ಷಾ, ಟ್ಯಾಕ್ಸಿ ಚಾಲಕರ ಸಂಘಗಳುಬೆಂಬಲ ನೀಡಿವೆ. ಇನ್ನೂ ಹಲವು ಸಂಘಟನೆಗಳ ಜೊತೆ ಭಾನುವಾರ ಮಾತುಕತೆ ನಡೆಸಲಾಗುವುದು’ ಎಂದು ಹೇಳಿದರು.

‘ರಾಜ್ಯದಾದ್ಯಂತ ಪ್ರವಾಸ ಮಾಡಿ ಬಂದ್ ಬಗ್ಗೆ ಮನವರಿಕೆ ಮಾಡಲಾಗಿದೆ. ರೈತ ಸಂಘಟನೆಗಳು ಭಾರತ್ ಬಂದ್ ಯಶಸ್ವಿಯಗೊಳಿಸಲಿವೆ’ ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

‘ಬಂದ್ಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಬೇಕು’ ಎಂದು ಸೆಂಟರ್ ಆಫ್ ಆಲ್ ಇಂಡಿಯಾ ಟ್ರೇಡ್ ಯೂನಿಯನ್(ಸಿಐಟಿಯು) ಅಧ್ಯಕ್ಷೆ ವರಲಕ್ಷ್ಮಿ ಮನವಿ ಮಾಡಿದರು.

ಇದನ್ನೂ ಓದಿ:ಭಾರತ್ ಬಂದ್: ಸಾಹಿತಿಗಳು, ಕಲಾವಿದರ ಬೆಂಬಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.