ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು: ಸಿದ್ದರಾಮಯ್ಯ

Last Updated 4 ಫೆಬ್ರುವರಿ 2021, 6:32 IST
ಅಕ್ಷರ ಗಾತ್ರ

ಬೆಂಗಳೂರು: ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ವಿಧಾನಸಭೆಯವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಎಂದು ಉಲ್ಲೇಖಿಸಿದರು.

ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ? ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಕಳೆದ 70 ದಿನಗಿಂತಲೂ ಹೆಚ್ಚು ಸಮಯದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕಳೆದ ವರ್ಷ ನವೆಂಬರ್ 26ರಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಹೋರಾಟವನ್ನು ಪ್ರಾರಂಭಿಸಿತ್ತು. ಇದಕ್ಕೆ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಬೆಂಬಲ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT