ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರೈತ ವಿದ್ಯಾನಿಧಿ: ಆದಾಯ ಪ್ರಮಾಣಪತ್ರಕ್ಕೆ ಫೆ.29 ಗಡುವು

Published 17 ಫೆಬ್ರುವರಿ 2024, 14:50 IST
Last Updated 17 ಫೆಬ್ರುವರಿ 2024, 14:50 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಲ್ಲಿ 2023-24ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಅಭ್ಯರ್ಥಿಗಳು ಫೆ.29ರ ಒಳಗೆ ಆದಾಯ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಸೂಚಿಸಿದೆ.

ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ₹2.50 ಲಕ್ಷ ಮೀರಿರಬಾರದು. ಯೋಜನೆಯಡಿ ಸೌಲಭ್ಯ ಪಡೆಯುವ ರೈತರು ಹಾಗೂ ಕೃಷಿ ಕಾರ್ಮಿಕರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ವಿಭಾಗಕ್ಕೆ (ಎಸ್‍ಎಸ್‍ಪಿ) ಸಲ್ಲಿಸಬೇಕು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT