ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | ಭ್ರೂಣ ಹತ್ಯೆ; ಮತ್ತಿಬ್ಬರ ಬಂಧನ

Published 10 ಮೇ 2024, 0:08 IST
Last Updated 10 ಮೇ 2024, 0:08 IST
ಅಕ್ಷರ ಗಾತ್ರ

ಪಾಂಡವಪುರ (ಮಂಡ್ಯ ಜಿಲ್ಲೆ): ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಇಬ್ಬರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೇರಿದೆ.

ತಾಲ್ಲೂಕಿನ ಸುಂಕಾತೊಣ್ಣೂರು ಗ್ರಾಮದ ನವೀನ್ ಕುಮಾರ್‌, ಮೈಸೂರೂ ತಾಲ್ಲೂಕಿನ ಡಿ.ಸಾಲುಂಡಿ ಗ್ರಾಮದ  ಕುಮಾರ್ ಬಂಧಿತರು.

‘ನವೀನ್‌ ಕುಮಾರ್‌ ಹಿಂದೆ ಕೂಡ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಯಾಗಿ ಬಂಧಿತನಾಗಿದ್ದ. ಜಾಮೀನಿನ ಮೇಲೆ ಹೊರಬಂದು ಮತ್ತೆ ಕೃತ್ಯ ಮುಂದುವರಿಸಿದ್ದ. ಚಾಲಕನಾಗಿರುವ ಈತ ಗರ್ಭಪಾತ ಮಾಡಿಸಿಕೊಳ್ಳುವವರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ಯುತ್ತಿದ್ದ. ಗಾರೆ ಕೆಲಸ ಮಾಡುತ್ತಿದ್ದ ಕುಮಾರ್‌ ಪ್ರಕರಣದಲ್ಲಿ ಮಾಹಿತಿದಾರನಾಗಿ ಕೆಲಸ ಮಾಡುತ್ತಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

ಕುಮಾರ
ಕುಮಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT