ನವದೆಹಲಿ: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೇಕಿರುವಷ್ಟು ರಸಗೊಬ್ಬರ ದಾಸ್ತಾನು ಇದೆ ಎಂದು ಕೇಂದ್ರ ರಸಗೊಬ್ಬರ ಖಾತೆಯ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ತಿಳಿಸಿದರು.

ಲೋಕಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕೇಳಿದ ಪ್ರಶ್ನೆಗೆ ಅವರು ಶುಕ್ರವಾರ ಈ ಉತ್ತರ ನೀಡಿದರು.

ಪ್ರತಿ ಬೆಳೆ ಋತುವಿನ ಆರಂಭದ ಮೊದಲು, ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯು ಎಲ್ಲ ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚಿಸಿ, ರಾಜ್ಯವಾರು ಮತ್ತು ಮಾಸಿಕ ರಸಗೊಬ್ಬರಗಳ ಅಗತ್ಯವನ್ನು ನಿರ್ಣಯಿಸುತ್ತದೆ. ರಾಜ್ಯಗಳಿಗೆ ಸಾಕಷ್ಟು ಪ್ರಮಾಣದ ರಸಗೊಬ್ಬರಗಳನ್ನು ಹಂಚಿಕೆ ಮಾಡುತ್ತದೆ ಮತ್ತು ಲಭ್ಯತೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ ಎಂದರು.

ಕಳಪೆ ರಸಗೊಬ್ಬರ: ಐದು ಎಫ್ಐಆರ್

ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ʼರೈತರಿಗೆ ನಕಲಿ ಅಥವಾ ಕಳಪೆ ಗುಣಮಟ್ಟದ ರಸಗೊಬ್ಬರಗಳನ್ನು ಮಾರಾಟ ಮಾಡುತ್ತಿರುವ ಕೆಲವು ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿವೆ. ಪ್ರಸ್ತುತ ವರ್ಷದಲ್ಲಿ, ರಾಜ್ಯದಲ್ಲಿ 05 ಪ್ರಕರಣಗಳನ್ನು ದಾಖಲಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಎರಡು ಹಾಗೂ ಹಾವೇರಿಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆʼ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.