ಬಿಸಿಯೂಟ ಯೋಜನೆಯಲ್ಲಿ ಸಮುದಾಯದ ಸಹಭಾಗಿತ್ವ ಉತ್ತೇಜಿಸಲು ಆಯಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಕ್ರಮ ಕೈಗೊಳ್ಳಬೇಕು. ಸ್ವಯಂ ಸೇವಾ ಸಂಸ್ಥೆಗಳು, ಕೈಗಾರಿಕೆಗಳು, ವಾಣಿಜ್ಯ, ವ್ಯಾಪಾರದ ಪ್ರಮುಖರು, ಸಮುದಾಯದ ಸದಸ್ಯರ ನೆರವು ಪಡೆಯಬೇಕು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ಜನುಮ ದಿನ, ರಾಜ್ಯ ಸ್ಥಾಪನೆಯ ದಿನಗಳು, ರಾಷ್ಟ್ರೀಯ ಪ್ರಾಮುಖ್ಯತೆಯ ದಿನಗಳಲ್ಲಿ ಅಂಥವರ ನೆರವು ಪಡೆದು ವಿಶೇಷ ಭೋಜನಕ್ಕೆ ವ್ಯವಸ್ಥೆ ಮಾಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.