ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ಜತೆಗೆ ಗುರುವಾರ ರಾತ್ರಿ ದೂರವಾಣಿ ಮೂಲಕ ಚರ್ಚಿಸಿ, ಸಿಐಡಿ ತನಿಖೆ ನಡೆಸುವಂತೆ ಸೂಚಿಸಿದ್ಧಾರೆ.

ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಕಡೆ ಹೆಣ್ಣುಭ್ರೂಣ ಹತ್ಯೆ ಪ್ರಕರಣ ನಡೆದಿದ್ದು, ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಇದುವರೆಗೂ 9 ಮಂದಿಯನ್ನು ಬಂಧಿಸಿದ್ದಾರೆ.

ಆರೋಪಿಗಳು ಮೂರು ವರ್ಷಗಳ ಅವಧಿಯಲ್ಲಿ 900ಕ್ಕೂ ಹೆಚ್ಚು ಹೆಣ್ಣುಭ್ರೂಣ ಹತ್ಯೆ ನಡೆಸಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.