ಸಾರಿ ಪ್ರಕರಣಗಳಲ್ಲಿ ಪರೀಕ್ಷೆ ಕಡ್ಡಾಯ
ಉಸಿರಾಟದ ತೀವ್ರ ಸಮಸ್ಯೆಯ (ಸಾರಿ) ಎಲ್ಲ ಪ್ರಕರಣಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗಳನ್ನು ನಡೆಸಬೇಕು ಎಂದು ಸೂಚಿಸಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು, ಶೇ 5ರಷ್ಟು ಶೀತಜ್ವರ ಮಾದರಿ ಅನಾರೋಗ್ಯ ಸಮಸ್ಯೆ ಪ್ರಕರಣಗಳಲ್ಲಿ ಗಂಟಲು ದ್ರವದ ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಕಳುಹಿಸಬೇಕು ಎಂದು ಕೋವಿಡ್ ನೋಡಲ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಅವರು ಸುತ್ತೋಲೆ ಹೊರಡಿಸಿದ್ದು, ಎಲ್ಲ ಕೋವಿಡ್ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗಾಲಯಗಳಲ್ಲಿಯೇ ನಡೆಸಬೇಕು. ಲಭ್ಯವಿರುವ ಕೋವಿಡ್ ಪರೀಕ್ಷಾ ಕಿಟ್‌ಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.