ಬ್ರಿಟನ್ ಮುಂತಾದ ದೇಶಗಳಲ್ಲಿ ಪತ್ತೆಯಾದ ಕೋವಿಡ್ ರೂಪಾಂತರ ವೈರಾಣು ಹರಡುವಿಕೆ ನಿಯಂತ್ರಿಸಲು, ತಜ್ಞರ ಸಲಹೆಯಂತೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿತ್ತು. ಸಾರ್ವಜನಿಕ ವಲಯದ ಅಭಿಪ್ರಾಯಗಳನ್ನು ಪರಿಗಣಿಸಿ, ಸಚಿವರುಗಳ ಮತ್ತು ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ. (1/3)
ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಯನ್ನು ಸರಳವಾಗಿ ಆಚರಿಸಿ, ಸುರಕ್ಷತೆಯ ದೃಷ್ಟಿಯಿಂದ ಹೆಚ್ಚು ಗುಂಪುಗೂಡದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರು ಸ್ವಯಂ ನಿರ್ಬಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. (2/3)
ಅನಗತ್ಯವಾಗಿ ಸಂಚರಿಸದೆ ಹಾಗೂ ಸರ್ಕಾರ ವಿಧಿಸಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಕೋವಿಡ್ ಸಾಂಕ್ರಾಮಿಕದ ಹರಡುವಿಕೆಯನ್ನು ತಡೆಯಲು ಕೋರಿದೆ. (3/3)