ಬೆಂಗಳೂರು: ‘ಜಿಂದಾಲ್ ಸಂಸ್ಥೆಗೆ 3,666 ಎಕರೆ ಜಮೀನು ನೀಡುವ ಜನ ವಿರೋಧಿ ನಿರ್ಣಯವನ್ನು ಸರ್ಕಾರ ಈ ಕೂಡಲೇ ಹಿಂಪಡೆಯಬೇಕು. ಇಲ್ಲವಾದರೆ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಭೂಮಿ ಹೆದ್ದಾರಿಯ ಪಕ್ಕದಲ್ಲೇ ಇರುವುದರಿಂದ ಒಂದು ಎಕರೆಗೆ ಕನಿಷ್ಠ ಬೆಲೆ ₹25 ಲಕ್ಷದಿಂದ ₹1 ಕೋಟಿಯವರೆಗೂ ಇದೆ. ಆದರೆ,ಕೇವಲ ₹1.50 ಲಕ್ಷಕ್ಕೆ ಒಂದು ಎಕರೆ ಜಮೀನು ಮಾರಾಟ ಮಾಡಲು ಹೊರಟಿರುವ ಸರ್ಕಾರದ ತೀರ್ಮಾನವನ್ನು ಖಂಡಿಸುತ್ತೇವೆ’ ಎಂದರು.

‘ಜಿಂದಾಲ್ ಸಂಸ್ಥೆ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿ ಹಣವನ್ನು ಬಾಕಿ ಉಳಿಸಿಕೊಂಡಿದ್ದು, ಅದನ್ನು ವಸೂಲಿ ಮಾಡಲು ಮೊದಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ಯಾವುದೇ ಭೂಮಿ ಮತ್ತು ಕಟ್ಟಡಗಳನ್ನು ಮಾರಾಟ ಮಾಡುವ ನಿರ್ಧಾರವನ್ನು ಕೈಬಿಡಬೇಕು. ಆ ಭೂಮಿಯನ್ನು ಸಾರ್ವಜನಿಕರಿಗೆ ನೀಡಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.