ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕ ನಿರಂತರ ಹೋರಾಟ: ಶಾಸಕ ದೊಡ್ಡನಗೌಡ ಪಾಟೀಲ

Published : 2 ಅಕ್ಟೋಬರ್ 2024, 8:12 IST
Last Updated : 2 ಅಕ್ಟೋಬರ್ 2024, 8:12 IST
ಫಾಲೋ ಮಾಡಿ
Comments

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಲೂ ಕುರ್ಚಿಗೆ ಅಂಟಿಕೊಂಡು ಕುಳಿತಿರುವುದು ಸರಿಯಲ್ಲ. ಅವರು ರಾಜೀನಾಮೆ ನೀಡುವ ತನಕ ‌ನಿರಂತರ ಹೋರಾಟ ಮಾಡಲಾಗುವುದು ಎಂದು ಕುಷ್ಟಗಿ ಕ್ಷೇತ್ರದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು‌.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಬಳಿಕವೂ ಸಿ.ಎಂ. ಆಗಿ ಮುಂದುವರಿಯುವುದು ಸರಿಯಲ್ಲ. ರಾಜ್ಯ ಸರ್ಕಾರ ವಾಲ್ಮೀಕಿ‌ ನಿಗಮದ ಹಗರಣವೂ ಸೇರಿದಂತೆ ಪರಿಶಿಷ್ಟ ಸಮುದಾಯಕ್ಕೆ ಸಂಬಂಧಿಸಿದ ಅನುದಾನ ಹೆಚ್ಚು ದುರ್ಬಳಕೆ ಮಾಡಿಕೊಂಡಿದೆ ಎಂದರು.

ತನಿಖೆ ಮೇಲೆ ಸಿದ್ದರಾಮಯ್ಯ ಅವರಿಗೆ ನಂಬಿಕೆ ಇದ್ದರೆ ಮೊದಲು ರಾಜೀನಾಮೆ ‌ನೀಡಲಿ ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ ಮಾತನಾಡಿ, ಸಿಎಂ ಭಂಡತನ ಪ್ರದರ್ಶಿಸುವುದನ್ನು ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ನೈತಿಕವಾಗಿ ಸಿಎಂ ಆಗಿ ಮುಂದುವರಿಯಲು ಅರ್ಹರಿಲ್ಲ‌. ಹಿಂದೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರೋಪ ಕೇಳಿ ಬಂದಾಗ ಅವರು ರಾಜೀನಾಮೆ ಕೊಟ್ಟಿದ್ದರು. ಈಗ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದರು.

ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಜಿಲ್ಲಾ ವಕ್ತಾರ ಸೋಮಶೇಖರ, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ ಹಾದಿಮನಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT