ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೈಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಶೋಕ

Published 18 ಏಪ್ರಿಲ್ 2024, 13:42 IST
Last Updated 18 ಏಪ್ರಿಲ್ 2024, 13:42 IST
ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ಸರ್ಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು, ಪಾಕಿಸ್ತಾನ ಬೆಂಬಲಿತರು, ಟಿಪ್ಪು ಸಿದ್ಧಾಂತವಾದಿಗಳು ಹೆಚ್ಚಿದ್ದಾರೆ. ಭಯೋತ್ಪಾದನೆ ಹಾಗೂ ಬಾಂಬ್‌ ಸ್ಫೋಟದಂತಹ ಘಟನೆಗಳು ನಡೆಯುತ್ತಿರುವುದು ಬಹಳ ಆತಂಕಕಾರಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT