ಬೆಳಗಾವಿ (ಸುವರ್ಣ ವಿಧಾನಸೌಧ): ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಒಂದು ದಿನದ ವೇತನಸಹಿತ ಮುಟ್ಟಿನ ರಜೆ ನೀಡುವುದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುವ, ಮುಟ್ಟು ಆದವರನ್ನು ಕೆಟ್ಟದಾಗಿ ನಡೆಸಿಕೊಳ್ಳುವ, ತಾರತಮ್ಯ ಮಾಡುವ ಅಥವಾ ಅಸ್ಪೃಶ್ಯ ಎಂದು ಪರಿಗಣಿಸುವವರಿಗೆ ₹ 5 ಸಾವಿರದವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸುವ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
.ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನ ರಜೆ: ಬೆಳಿಗ್ಗೆ ತಡೆ, ಮಧ್ಯಾಹ್ನ ತೆರವು.
ಈ ಉದ್ದೇಶದಿಂದ ‘ಕರ್ನಾಟಕ ಮಹಿಳಾ ಯೋಗಕ್ಷೇಮ ರಜೆ ಕಾಯ್ದೆ– 2025’ರ ಕರಡು ಮಸೂದೆಯನ್ನು ಸರ್ಕಾರ ಸಿದ್ಧಪಡಿಸಿದೆ. ಇಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡನೆಯಾಗುವ ಸಾಧ್ಯತೆಯಿದೆ.
.ಆಳ –ಅಗಲ | ಮುಟ್ಟಿನ ರಜೆ: ಮಹಿಳೆಯರ ಹಕ್ಕು.
‘ರಾಜ್ಯ ಸರ್ಕಾರದ ಅಧೀನದ ಶಿಕ್ಷಣ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸೇವೆಗಳಲ್ಲಿ ತೊಡಗಿರುವ ಮಹಿಳೆಯರು ಮುಟ್ಟಾದರೆ, ಆ ಅವಧಿಯಲ್ಲಿ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ. ಮಸೂದೆಯ ಅನ್ವಯ ಹುಡುಗಿಯರು, ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಮುಟ್ಟಿನ ರಜೆ ಪಡೆಯಲು ಅರ್ಹರು’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ.
.ಋತುಚಕ್ರದ ರಜೆ: ಗಂಟೆಗಳ ಅಂತರದಲ್ಲೇ ತನ್ನದೇ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ..!.
‘ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಮುಟ್ಟಿನ ರಜೆಯನ್ನು ಮಂಜೂರು ಮಾಡಿ ಈಗಾಗಲೇ ಸರ್ಕಾರ ಆದೇಶ ಹೊರಡಿಸಿದೆ. ಋತುಚಕ್ರ ಹೊಂದಿರುವ 18 ವರ್ಷದಿಂದ 52 ವರ್ಷ ವಯಸ್ಸಿನ ಮಹಿಳಾ ಸರ್ಕಾರಿ ನೌಕರರಿಗೆ ಈ ರಜೆ ಅನ್ವಯವಾಗಲಿದೆ. ತಿಂಗಳಿಗೆ ಒಂದರಂತೆ ವರ್ಷಕ್ಕೆ ಒಟ್ಟು 12 ಮುಟ್ಟಿನ ರಜೆ ಪಡೆಯಬಹುದು ಎಂದೂ ಈ ಆದೇಶದಲ್ಲಿ ವಿವರಿಸಿದೆ. ಈ ಆದೇಶಕ್ಕೆ ಕಾನೂನು ಬಲ ನೀಡಲು ಕಾಯ್ದೆ ರೂಪಿಸಲಾಗುತ್ತಿದೆ’ ಎಂದೂ ಮೂಲಗಳು ತಿಳಿಸಿವೆ.

ಮುಟ್ಟಿನ ಸಮಯದಲ್ಲಿ ಗಂಭೀರ ಸಮಸ್ಯೆಗಳನ್ನು ಎದುರಿಸಿದರೆ ಮಾತ್ರ ಮುಟ್ಟು ಆದವರು ಮುಟ್ಟಿನ ರಜೆ ಪಡೆಯಬಹುದು. ಆದರೆ, ಅದಕ್ಕೆ ವೈದ್ಯಕೀಯ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಲ್ಲ. ಏಕೆಂದರೆ, ಅದರಿಂದ ವಿಳಂಬ ಆಗಬಹುದು. ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ರಜೆ ನೀಡುವಂತೆ ವಿನಂತಿ ಅಥವಾ ಇ–ಮೇಲ್ ಕಳುಹಿಸಿದರೆ ಸಾಕು. ಮುಟ್ಟಿನ ರಜೆ ಪಡೆಯುವುದನ್ನು ಉನ್ನತ ಅಧಿಕಾರಿಗಳು ಅನಗತ್ಯವಾಗಿ ಪ್ರಚಾರ ಮಾಡಬಾರದು. ಮುಟ್ಟು ಆದವರು ಅರ್ಧ ದಿನ ರಜೆ ಬೇಕಾದರೂ ಪಡೆಯಬಹುದು ಎಂದೂ ಮಸೂದೆಯಲ್ಲಿದೆ.
.ಸಂಗತ | ಮುಟ್ಟು: ಆರೋಗ್ಯಕರ ವಾತಾವರಣ ಅಗತ್ಯ.
ಋತುಸ್ರಾವವನ್ನು ಸುರಕ್ಷಿತ, ಸುಭದ್ರ ಮತ್ತು ಸುಲಭವಾಗಿ ವಿಲೇವಾರಿ ಮಾಡಲು ತ್ಯಾಜ್ಯ ಡಸ್ಟ್ಬಿನ್ಗಳು, ಟಿಶ್ಯೂ ಪೇಪರ್, ಟಾಯ್ಲೆಟ್ ಪೇಪರ್ಗಳು, ಬ್ಯಾಗ್ಗಳು, ಲಕೋಟೆಗಳು, ಪತ್ರಿಕೆಗಳನ್ನು ಒದಗಿಸಬೇಕು. ಮುಟ್ಟಿನ ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಲು ಮತ್ತು ಮುಟ್ಟಿನ ಆರೋಗ್ಯ ಶಿಕ್ಷಣ ಮತ್ತು ನೈರ್ಮಲ್ಯ ಉತ್ಪನ್ನಗಳು, ಋತುಚಕ್ರ ಸ್ನೇಹಿ ಶೌಚಾಲಯಗಳು ಇತ್ಯಾದಿಗಳ ಕುರಿತು ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾರ್ಯಾಗಾರಗಳು, ಸಾರ್ವಜನಿಕ ಭಾಷಣಗಳು, ಉಪನ್ಯಾಸಗಳು, ವಿಚಾರ ಸಂಕಿರಣಗಳು, ಚರ್ಚೆಗಳನ್ನು ಆಯೋಜಿಸಲು ಪ್ರತಿವರ್ಷ ಮೇ 28ರಂದು ‘ಮುಟ್ಟಿನ ನೈರ್ಮಲ್ಯ ದಿನ’ ಎಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದೂ ಈ ಮಸೂದೆ ಹೇಳಿದೆ.

ಪ್ರಯೋಜನಗಳೇನು?

ಸರ್ಕಾರಿ ಅಥವಾ ಯಾವುದೇ ಖಾಸಗಿ ಸಂಸ್ಥೆಯಲ್ಲಿ ಮುಟ್ಟಿನ ಸಮಯದಲ್ಲಿ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ಪಡೆಯಬಹುದು ಮತ್ತು ಕೆಲಸಕ್ಕೆ ಗೈರಾಗಬಹುದು

ಭಾನುವಾರ ಅಥವಾ ಯಾವುದೇ ಇತರ ಸಾಮಾನ್ಯ ರಜಾ ದಿನಗಳಿದ್ದಲ್ಲಿ ಮರುದಿನ ಒಂದು ದಿನದ ಮುಟ್ಟಿನ ರಜೆ ಪಡೆಯಬಹುದು

ಇತರ ರಜೆಗಳಲ್ಲಿ (ಸಿಎಲ್, ಇಎಲ್, ಆರ್ಎಸ್ ಇತ್ಯಾದಿ) ದಿನಗಳಲ್ಲಿ ಮುಟ್ಟಾದರೆ, ಯಾವುದೇ ಮುಟ್ಟಿನ ರಜೆ ಪಡೆಯಲು ಅರ್ಹತೆ ಇಲ್ಲ

ಮುಟ್ಟಿನ ರಜೆ ಪಡೆಯಲು ಬಯಸದಿದ್ದರೆ ಮನೆಯಿಂದ ಕೆಲಸ ಮಾಡಬಹುದು. ವರ್ಷದಲ್ಲಿ ಮುಟ್ಟಿನ ರಜೆ ದಿನಗಳ ಸಂಖ್ಯೆ 12 ಮೀರಬಾರದು

ಮುಟ್ಟಿನ ರಜೆ ಪಡೆಯುವ ಅರ್ಹತೆಯು ಋತುಬಂಧವಾದಾಗ ಅಥವಾ ಉದ್ಯೋಗಿ 52 ವರ್ಷ ವಯಸ್ಸಿನವರಾದಾಗ ಯಾವುದು ಮೊದಲೊ ಆ ದಿನ ಕೊನೆಗೊಳ್ಳಲಿದೆ

ಬಳಕೆಯಾಗದ ಮಾಸಿಕ ಮುಟ್ಟಿನ ರಜೆ ಸಂಗ್ರಹ ಆಗುವುದಿಲ್ಲ. ನಂತರದ ತಿಂಗಳುಗಳಿಗೆ ಸೇರಿಸಲು ಕೂಡಾ ಅವಕಾಶ ಇಲ್ಲ

ವಿದ್ಯಾರ್ಥಿನಿಯರು ಮುಟ್ಟಾದರೆ ಪ್ರತಿ ತಿಂಗಳು ಎರಡು ದಿನ ರಜೆ ಮತ್ತು ಮುಟ್ಟಿನ ಸಮಸ್ಯೆಗಳಿಗೆ ಹಾಜರಾತಿಯಲ್ಲಿ
ಶೇ 2ರಷ್ಟು ವಿನಾಯಿತಿ ನೀಡಬೇಕು

ಪ್ರತ್ಯೇಕ ವಿಶ್ರಾಂತಿ ಕೊಠಡಿಗಳಲ್ಲಿ ಜೈವಿಕವಾಗಿ ಕೊಳೆಯುವ ಸ್ಯಾನಿಟರಿ ಪ್ಯಾಡ್ಗಳು, ಮುಟ್ಟಿನ ಕಪ್ಗಳು, ಸ್ಯಾನಿಟರಿ ನ್ಯಾಪ್ಕಿನ್ಗಳನ್ನು ಒದಗಿಸಬೇಕು

.ಮುಟ್ಟಿನ ರಜೆ: ವಿವಿಧ ಕ್ಷೇತ್ರಗಳ ಮಹಿಳೆಯರ ಅಭಿಪ್ರಾಯ ಇಲ್ಲಿದೆ.
ಬೆಳಿಗ್ಗೆ ತಡೆ, ಮಧ್ಯಾಹ್ನ ತೆರವು

ಬೆಂಗಳೂರು: ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಏಕಸದಸ್ಯ ನ್ಯಾಯಪೀಠವೊಂದು ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದ ಅಪರೂಪದ ಘಟನೆಗೆ ಕರ್ನಾಟಕ ಹೈಕೋರ್ಟ್ ಸಾಕ್ಷಿಯಾಯಿತು.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ, ‘ಬೆಂಗಳೂರು ಹೋಟೆಲ್ಗಳ ಸಂಘ’ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಬೆಳಗಿನ ಕಲಾಪದಲ್ಲಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಕೆ.ಪ್ರಶಾಂತ್ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಅಧಿಸೂಚನೆಗೆ ಮಧ್ಯಂತರ ತಡೆ ನೀಡಿತು. ‘ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ’ ಎಂದು ಆದೇಶಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಈ ತಡೆ ಆದೇಶ ಹೊರಬೀಳುತ್ತಿದ್ದಂತೆಯೇ, ಕಲಾಪ ಕೊನೆಗೊಳ್ಳುವ ಸಮಯದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಗೂ ಮಧ್ಯಂತರ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ನ್ಯಾಯಪೀಠದ ಮುಂದೆ ಹಾಜರಾಗಿ, ‘ಪ್ರತಿವಾದಿಗಳ ಆಕ್ಷೇಪಣೆ ಆಲಿಸದೇ ಅರ್ಜಿದಾರರ ಮಧ್ಯಂತರ ಮನವಿಯನ್ನು ಮಾನ್ಯ ಮಾಡಲಾಗಿದೆ’ ಎಂದು ಆದೇಶಕ್ಕೆ ತೀವ್ರ ತಕರಾರು ವ್ಯಕ್ತಪಡಿಸಿದರು.

ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಶಶಿಕಿರಣ ಶೆಟ್ಟಿ ಅವರು, ‘ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ. ಇದಕ್ಕೆ ಅನುಗುಣವಾಗಿಯೇ ರಾಜ್ಯ ಕಾನೂನು ಆಯೋಗ ಶಿಫಾರಸು ಮಾಡಿದೆ. ಇದನ್ನೆಲ್ಲಾ ಪರಿಗಣಿಸಿಯೇ, ರಾಜ್ಯ ಸರ್ಕಾರ ಸಾಂವಿಧಾನಿಕವಾಗಿ ಕೊಡಮಾಡಲಾಗಿರುವ 142ನೇ ವಿಧಿಯಡಿ ತನ್ನ ಅಧಿಕಾರ ಬಳಸಿ ಈ ಕ್ರಮ ಕೈಗೊಂಡಿದೆ. ಅಧಿಸೂಚನೆ ಕಾನೂನುಬದ್ಧವಾಗಿಯೇ ಇದೆ. ಹೀಗಿರುವಾಗ, ಸರ್ಕಾರದ ವಿಸ್ತೃತ ವಾದ ಆಲಿಸದೆಯೇ ಅಧಿಸೂಚನೆಗೆ ತಡೆ ನೀಡಿರುವುದು ಸಲ್ಲ’ ಎಂದು ಆಕ್ಷೇಪ ವ್ಯಕ್ತಪಡಿಸಿ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರು.

ಇದನ್ನು ಪರಿಗಣಿಸಿದ ನ್ಯಾಯಪೀಠ ಬೆಳಿಗ್ಗೆಯಷ್ಟೇ ಸರ್ಕಾರದ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆ ಆದೇಶವನ್ನು ಹಿಂಪಡೆಯಿತು. ಬುಧವಾರ (ಡಿ.10) ಉಭಯ ಪಕ್ಷಕಾರರ ವಾದ ಆಲಿಸಿ, ‘ಮಧ್ಯಂತರ ತಡೆ ಆದೇಶದ ಬಗ್ಗೆ ಸೂಕ್ತ ನಿರ್ಣಯ ಹೊರಡಿಸಲಾಗುವುದು’ ಎಂದು ತಿಳಿಸಿತು.

ಅರ್ಜಿಯಲ್ಲಿ ಏನಿದೆ?: ‘ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ವೇತನ ಸಹಿತ ಮುಟ್ಟಿನ ರಜೆ ಒದಗಿಸಬೇಕು’ ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಅಧಿಸೂಚನೆ ಹೊರಡಿಸಿತ್ತು. ‘ಇದು ಸಂವಿಧಾನದ 14ನೇ ವಿಧಿಗೆ ವಿರುದ್ಧವಾಗಿದ್ದು ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
.ಸಂಪಾದಕೀಯ | ಋತುಚಕ್ರ ನೀತಿ: ಮಹತ್ವದ ನಡೆ ಅನುಷ್ಠಾನದಲ್ಲಿ ಇಚ್ಛಾಶಕ್ತಿ ಅಗತ್ಯ.
ನಿಯಮ ಜಾರಿಗೆ ಪ್ರಾಧಿಕಾರ

ಕಾಯ್ದೆಯಲ್ಲಿರುವ ನಿಯಮಗಳನ್ನು ಜಾರಿ ಮಾಡಲು ರಾಜ್ಯ ಸರ್ಕಾರ ಪ್ರಾಧಿಕಾರವೊಂದನ್ನು ರಚಿಸಲಿದೆ. ಈ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರ ಅವಧಿ ಮೂರು ವರ್ಷ ಮಾತ್ರ. ಆರೋಗ್ಯ, ಮಹಿಳಾ, ಶಿಕ್ಷಣ ಮತ್ತು ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಪ್ರಾಧಿಕಾರದ ಪದನಿಮಿತ್ತ ಸದಸ್ಯರಾಗಿರುತ್ತಾರೆ. ವಕೀಲರು, ವೈದ್ಯರು, ಕಾರ್ಮಿಕ ಸಂಘಗಳು, ಸಮಾಜ ಸೇವಾ ಕ್ಷೇತ್ರದ ಇಬ್ಬರು, ಮಹಿಳಾ ಕಾರ್ಯಕರ್ತೆಯರ, ಮಹಿಳೆಯರ ಪರವಾಗಿ ಹೋರಾಡುತ್ತಿರುವವರು ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾಗಿರುತ್ತಾರೆ. ದೂರು, ಕುಂದುಕೊರತೆ ಪರಿಹಾರಕ್ಕೆ ಪ್ರಾಧಿಕಾರವು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ಸೇರಬೇಕು. ನಿಯಮಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಯಾವುದೇ ಅಧಿಕಾರಿಯಿಂದ ಸಹಾಯ ಪಡೆಯಲು ಪ್ರಾಧಿಕಾರ ಮುಕ್ತವಾಗಿರುತ್ತದೆ. ನಿಯಮ ಉಲ್ಲಂಘಿಸಿದವರು ಈ ಪ್ರಾಧಿಕಾರವು ವಿಧಿಸುವ ದಂಡ ಪಾವತಿಸಲು ಹೊಣೆಗಾರರಾಗಿರುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.