ಬೆಂಗಳೂರು: ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಆರೋಪಿಸಿ ಯುವತಿ ನೀಡಿದ ದೂರಿನ ಮೇರೆಗೆ ಬಿಜೆಪಿ ಮುಖಂಡರೊಬ್ಬರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ.

ಸಂತ್ರಸ್ತೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು ₹ 6 ಲಕ್ಷ ಹಣದ ಸಹಾಯ ಕೇಳಿದ್ದರು ಎನ್ನಲಾಗಿದೆ.

ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದಿಂದ 2018ರ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿಯಿಂದ ಟಿಕೆಟ್ ಪಡದು ಸ್ಪರ್ಧಿಸಿ ಸೋತಿದ್ದರು.

ಆರೋಪಿ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.