ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ ವಿರುದ್ಧ ಎಫ್ಐಆರ್ | ಪದೇ ಪದೇ ಚರ್ಚೆ ಬೇಡ: ಡಿ.ಕೆ. ಶಿವಕುಮಾರ್

Published : 28 ಸೆಪ್ಟೆಂಬರ್ 2024, 9:14 IST
Last Updated : 28 ಸೆಪ್ಟೆಂಬರ್ 2024, 9:14 IST
ಫಾಲೋ ಮಾಡಿ
Comments

ಬೆಂಗಳೂರು: 'ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾಗಿರುವ ಬಗ್ಗೆ ಎಐಸಿಸಿ ಅಧ್ಯಕ್ಷರು ಪಕ್ಷದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಪದೇ ಪದೆ ಈ ಬಗ್ಗೆ ಚರ್ಚೆ ಮಾಡಲು ಬಯಸುವುದಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಈ ವಿಚಾರವಾಗಿ ನಾನು ಈಗಾಗಲೇ ಸಾಕಷ್ಟು ಮಾತನಾಡಿದ್ದೇನೆ' ಎಂದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಕೇಳಿದಾಗ, 'ಯಾರು ದೂರು ನೀಡಿದ್ದಾರೆ, ಯಾವ ಕಾರಣಕ್ಕೆ ನೀಡಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ. ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುತ್ತೇನೆ” ಎಂದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT