ಬೆಂಗಳೂರು: ‘ಯುವಕನೊಬ್ಬನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಡೂರು ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು’ ಎಂದು ಹೈಕೋರ್ಟ್, ಬಳ್ಳಾರಿ ಜಿಲ್ಲಾ ಎಸ್ಪಿಗೆ ಆದೇಶಿಸಿದೆ.

‘ನನ್ನ ಮೇಲೆ ತೀವ್ರವಾಗಿ ಹಲ್ಲೆ ನಡೆಸಿರುವ ಸಂಡೂರು ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಬೇಕು’ ಎಂದು ಕೋರಿ ಬಳ್ಳಾರಿಯ ಕೋಳೂರು ಗ್ರಾಮದ ವಿ.ವಿವೇಕಾನಂದ (25) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಈ ಕುರಿತಂತೆ ಆದೇಶಿಸಿದೆ.

‘ಅರ್ಜಿದಾರರ ಮೇಲೆ ಇನ್ಸ್ಪೆಕ್ಟರ್ ಬರ್ಬರ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೆ ಸಾಕ್ಷ್ಯವಾಗಿ ಅರ್ಜಿಯೊಂದಿಗೆ ಕೆಲ ಪೋಟೋಗಳನ್ನೂ ಲಗತ್ತಿಸಲಾಗಿದೆ. ಆದರೂ ದೂರು ದಾಖಲಿಸದೆ ಅರ್ಜಿದಾರರಿಗೆ ತಬರನ ಸ್ಥಿತಿ ತಂದಿಡಲಾಗಿದೆ. ಆರೋಪಿ ಯಾರೇ ಆಗಿದ್ದರೂ ಆತ ಅಪರಾಧ ಎಸಗಿದ್ದರೆ ತನಿಖೆ ನಡೆಸಲೇಬೇಕು. ಪ್ರಕರಣದಲ್ಲಿ ದೂರು ದಾಖಲಿಸದೆ ಇರುವುದು ಸಂಪೂರ್ಣ ಕಾನೂನು ಬಾಹಿರ’ ಎಂದು ನ್ಯಾಯಪೀಠವು ಪೊಲೀಸರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

‘ಪೊಲೀಸರ ಈ ನಡೆ, ಲಲಿತಾ ಕಮಾರಿ v/s ಉತ್ತರ ಪ್ರದೇಶ ಸರ್ಕಾರದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಆರೋಪಿ ಪೊಲೀಸ್ ಇನ್ಸ್ಪೆಕ್ಟರ್ ಆಗಿರುವುದರಿಂದ ದೂರು ಪರಿಶೀಲಿಸಿ ಎಫ್ಐಆರ್ ದಾಖಲಿಸಬೇಕು. ಬಳ್ಳಾರಿ ಜಿಲ್ಲಾ ಎಸ್ಪಿ ನ್ಯಾಯಸಮ್ಮತ ತನಿಖೆಯನ್ನು ಖಾತರಿಪಡಿಸಬೇಕು’ ಎಂದು ನ್ಯಾಯಪೀಠ ತಾಕೀತು ಮಾಡಿದೆ.

‘ಈ ಪ್ರಕರಣ ಅತ್ಯಂತ ವಿಶೇಷವಾಗಿದೆ. ಅಗತ್ಯ ಎನಿಸಿದರೆ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಬೇರೆ ಪೊಲೀಸ್ ಠಾಣೆಗೆ ಆದೇಶಿಸಬಹುದು. ಆ ತನಿಖೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೇಲ್ವಿಚಾರಣೆಯಲ್ಲೇ ನಡೆಸಬೇಕು’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.

ಪ್ರಕರಣವೇನು?: ‘ಮಹೇಶ್ ಗೌಡ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ನಾನು 2025ರ ಆಗಸ್ಟ್ 28ರಂದು ಸಂಡೂರು ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆದರೆ, ಮಹೇಶ್ ಗೌಡ ಅದೇ ಠಾಣೆಯ ಇನ್ಸ್ಪೆಕ್ಟರ್ ಆಗಿರುವ ಕಾರಣಕ್ಕೆ ದೂರು ಸ್ವೀಕರಿಸಲಿಲ್ಲ. ಹಾಗಾಗಿ, ರಾಜ್ಯ ಗೃಹ ಸಚಿವರಿಗೆ ಮನವಿ ಸಲ್ಲಿಸಿದೆ. ಆದರೂ ದೂರು ದಾಖಲಾಗಲಿಲ್ಲ. ವಿಧಿ ಇಲ್ಲದೆ ಹೈಕೋರ್ಟ್ಗೆ ಈ ಅರ್ಜಿ ಸಲ್ಲಿಸಿದ್ದೇನೆ’ ಎಂದು ವಿವೇಕಾನಂದ ಆರೋಪಿಸಿದ್ದರು.

ಆರೋಪಿತ ಸ್ಥಾನದಲ್ಲಿರುವ ವ್ಯಕ್ತಿ ಅದೇ ಪೊಲೀಸ್ ಠಾಣೆಯ ಅಧಿಕಾರಿಯಾಗಿದ್ದರೂ ದೂರು ದಾಖಲಿಸಿಕೊಳ್ಳಲು ನಿರಾಕರಿಸುವಂತಿಲ್ಲ. ದೂರು ದಾಖಲಿಸುವುದು ಆರೋಪಿ ಯಾರು ಎಂಬ ಅಂಶವನ್ನು ಆಧರಿಸಿರುವುದಿಲ್ಲ.
ನ್ಯಾಯಮೂರ್ತಿ ಎಂ.ನಾಗಪ್ರಸನ್ನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.