ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನ ವಿರುದ್ಧದ ಪ್ರಕರಣ: ಮೈಸೂರಿಗೆ ವರ್ಗ

Published 18 ನವೆಂಬರ್ 2023, 23:30 IST
Last Updated 18 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಹೊಂದಿ ಮಹಿಳೆಯೊಬ್ಬರನ್ನು ವಂಚಿಸಿದ್ದಾರೆ’ ಎಂಬ ಆರೋಪದಡಿ ಬಳ್ಳಾರಿ ಕ್ಷೇತ್ರದ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ವೈ. ರಂಗನಾಥ್ ವಿರುದ್ಧ ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿದೆ.

‘ಮಹಿಳೆ ನೀಡಿದ್ದ ದೂರು ಆಧರಿಸಿ ರಂಗನಾಥ್ ವಿರುದ್ಧ ನ. 6ರಂದು ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು. ದೂರಿನ ಸಂಗತಿಗಳನ್ನು ಗಮನಿಸಿದಾಗ, ಮೈಸೂರಿನಲ್ಲಿ ಕೃತ್ಯ ನಡೆದಿರುವುದು ಗಮನಕ್ಕೆ ಬಂದಿದೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಮೈಸೂರಿನ ವಿಜಯನಗರ ಠಾಣೆಗೆ ವರ್ಗಾಯಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ರಂಗನಾಥ್ ನೀಡಿರುವ ದೂರು ಆಧರಿಸಿ ಮಹಿಳೆ ವಿರುದ್ಧವೂ ಮೈಸೂರಿನ ವಿಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎರಡೂ ಪ್ರಕರಣಗಳನ್ನೂ ವಿಜಯನಗರ ಪೊಲೀಸರು ತನಿಖೆ ನಡೆಸಲಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT