ಬೆಂಗಳೂರು: ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ನೇತೃತ್ವದಲ್ಲಿ 'ಫೈರ್' ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರುವಾರ ಭೇಟಿ ಮಾಡಿ, ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿ ಮಾದರಿಯಲ್ಲಿ ಕರ್ನಾಟದಲ್ಲೂ ಕನ್ನಡ ಚಿತ್ರೋದ್ಯಮದಲ್ಲಿ ಕಲಾವಿದೆಯರ ಮೇಲೆ ಆಗುತ್ತಿರುವ ಶೋಷಣೆಯ ಅಧ್ಯಯನಕ್ಕೆ ಸಮಿತಿ ರಚಿಸುವಂತೆ ಮನವಿ ಸಲ್ಲಿಸಿತು.