ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಪದವಿ ಕಾಲೇಜು ಬೋಧಕರ ವರ್ಗ

Last Updated 19 ಡಿಸೆಂಬರ್ 2022, 22:00 IST
ಅಕ್ಷರ ಗಾತ್ರ

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ಡಿ.21ರಿಂದ ಸರ್ಕಾರಿ ಪದವಿ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭಿಸುತ್ತಿದೆ.

ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ವರ್ಗಾವಣೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತದೆ ಎಂಬ ಬೋಧಕರು, ಪೋಷಕರ ವಿರೋಧ ಲೆಕ್ಕಿಸದೇ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗಿದೆ.

ರಾಜ್ಯದಲ್ಲಿ430 ಸರ್ಕಾರಿ ಪದವಿ ಕಾಲೇಜುಗಳಿದ್ದು, 9 ಸಾವಿರಕ್ಕೂ ಹೆಚ್ಚುಕಾಯಂ ಬೋಧಕ ಸಿಬ್ಬಂದಿ ಇದ್ದಾರೆ. ದಂಪತಿ ಪ್ರಕರಣಗಳಲ್ಲಿ ಶೇ 3, ಏಕ ಪೋಷಕರು–ವಿಧವೆಯರು, ಅಂಗವಿಕಲರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವ ವರ್ಗಗಳಿಗೆ ತಲಾ ಶೇ 1ರಷ್ಟು, ಸಾಮಾನ್ಯ ವರ್ಗಕ್ಕೆ ಶೇ 6ರಷ್ಟುಸೇರಿ ಒಟ್ಟು ಸಂಖ್ಯೆಯ ಶೇ 15ರಷ್ಟು ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ.
ಡಿ.21ರಿಂದ 24ರವರೆಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಯಲಿದೆ. ಮೊದಲ 21 ಹಾಗೂ 22 ವಿಶೇಷ ವರ್ಗಗಳಿಗೆ, 23 ಮತ್ತು 24ರಂದು ಸಾಮಾನ್ಯ ವರ್ಗದವರೆಗೆ ಕೌನ್ಸೆಲಿಂಗ್ ಇರುತ್ತದೆ.

ರಾಜ್ಯದ 102 ಪಾಲಿಟೆಕ್ನಿಕ್‌ ಕಾಲೇಜುಗಳ ಬೋಧಕ ಸಿಬ್ಬಂದಿ ವರ್ಗಾವಣೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT