ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನಿಗಮಗಳಿಗೆ ಐದು ಪ್ರಶಸ್ತಿ

Published 1 ಮಾರ್ಚ್ 2024, 15:50 IST
Last Updated 1 ಮಾರ್ಚ್ 2024, 15:50 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಐದು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿವೆ.

ದೆಹಲಿಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ (ಎಎಸ್‌ಆರ್‌ಟಿಯು) ನೀಡುವ ನ್ಯಾಷನಲ್‌ ಟ್ರಾನ್ಸ್‌ಪೋರ್ಟ್‌ ಎಕ್ಸಲೆನ್ಸ್‌ ಅವಾರ್ಡ್‌ ಇದಾಗಿದೆ. ದೇಶದ 62 ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಈ ಒಕ್ಕೂಟದ ಸದಸ್ಯತ್ವವನ್ನು ಹೊಂದಿವೆ.

ಬ್ರ್ಯಾಂಡಿಂಗ್‌, ವರ್ಚಸ್ಸು ಅಭಿವೃದ್ಧಿ ಉಪಕ್ರಮ ಮತ್ತು ಸಿಬ್ಬಂದಿ ಕಲ್ಯಾಣದ ಉಪಕ್ರಮಗಳಿಗಾಗಿ ಕೆಎಎಸ್‌ಆರ್‌ಟಿಸಿ ಎರಡು ಪ್ರಶಸ್ತಿಗಳಿಗೆ ಆಯ್ಕೆಯಾಗಿದೆ. ವಿದ್ಯುತ್‌ ಚಾಲಿತ ವಾಹನಗಳಾದ ‘ಅಸ್ತ್ರ’ ಕಾರ್ಯಾಚರಣೆಗೊಳಿಸಿದ್ದಕ್ಕಾಗಿ ಬಿಎಂಟಿಸಿ, ರಸ್ತೆ ಸಾರಿಗೆ ಸುರಕ್ಷತೆಯ ಉಪಕ್ರಮ ಅನುಷ್ಠಾನಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಹಾಗೂ ಸಾರಿಗೆ ಸುರಕ್ಷತೆ ಪದ್ಧತಿಯ ಅನುಷ್ಠಾನಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಪ್ರಶಸ್ತಿಗೆ ಆಯ್ಕೆಯಾಗಿವೆ.

ದೆಹಲಿಯ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟದಲ್ಲಿ ಮಾರ್ಚ್‌ 15ರಂದು ಪ್ರಶಸ್ತಿ ಪ್ರದಾನ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT