ಬೆಂಗಳೂರು: ರಾಜ್ಯಕ್ಕೆ ಪ್ರತ್ಯೇಕ ಎಂಎಸ್ಎಂಇ ನೀತಿ ಮತ್ತು ವಿಶೇಷ ಉತ್ತೇಜಕ ಕ್ರಮಗಳ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ.

ಸೋಮವಾರ ನಡೆದ ಬಜೆಟ್ ಪೂರ್ವ ಸಭೆಯಲ್ಲಿ ಎಫ್ಕೆಸಿಸಿಐ ಅಧ್ಯಕ್ಷೆ ಉಮಾರೆಡ್ಡಿ ಅವರು ಮುಖ್ಯಮಂತ್ರಿಯವರಿಗೆ ಮನವಿ ಪತ್ರವಲ್ಲಿ ಸಲ್ಲಿಸಿದರು.

ಸಂಸ್ಥೆಯ ಬೇಡಿಕೆಗಳು:

*ಆರ್ಥಿಕ ಚೇತರಿಕೆ, ಹೂಡಿಕೆ ಪುನಶ್ಚೇತನ, ಕೈಗಾರಿಕಾ ಬೆಳವಣಿಗೆ ಮತ್ತು ಬೆಂಗಳೂರಿನ ಆಚೆಗೂ ಅಭಿವೃದ್ಧಿಗೆ ಆದ್ಯತೆ ನೀಡಬೇಕು.

* ಮೂಲಸೌಕರ್ಯ ಅಭಿವೃದ್ಧಿ, ಕೈಗಾರಿಕಾ ಎಸ್ಟೇಟ್ಗಳನ್ನು ಮೇಲ್ದರ್ಜೆಗೆ ಏರಿಸುವುದು ಮತ್ತು ಕೈಗಾರಿಕಾ ಟೌನ್ಶಿಪ್ಗಳ ಸ್ಥಾಪನೆಗೆ ಒತ್ತು ನೀಡಬೇಕು.

*ಎಲ್ಲಾ ಕೈಗಾರಿಕಾ ಎಸ್ಟೇಟ್ಗಳು, ಕೈಗಾರಿಕಾ ಪಾರ್ಕ್ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡುವುದು.

* ಕೈಗಾರಿಕೆ ಮತ್ತು ಸೇವಾ ವಲಯದ ಉದ್ಯಮಗಳ ಆಸ್ತಿ ತೆರಿಗೆಯನ್ನು ತರ್ಕಬದ್ಧಗೊಳಿಸಬೇಕು, ಕೌಶಲಾಭಿವೃದ್ಧಿಗೆ ಚಟುವಟಿಕೆಗಳಿಗೆ ಉತ್ತೇಜನ.

* ರಾಜ್ಯದಲ್ಲಿ ಪ್ರವಾಸೋದ್ಯಮ ವಲಯದ ಬೆಳವಣಿಗೆಗೆ ಉತ್ತೇಜನ ಮತ್ತು ಇಂಧನ ವಲಯ ಮತ್ತು ಹಸಿರು ಇಂಧನಕ್ಕೆ ನೆರವು.

* ಉದ್ಯಮಿಗಳು ವ್ಯವಹಾರ ನಡೆಸುವ ಪ್ರಕ್ರಿಯೆ ಸರಳೀಕರಣ, ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವೇಗ ನೀಡುವುದು.

* ಉತ್ಪಾದನಾ ವಲಯದಲ್ಲಿ ಉತ್ತಮ ಬೆಳವಣಿಗೆಗೆ ಸಾಧಿಸಲು ಪ್ರೋತ್ಸಾಹ, ಕೈಗಾರಿಕಾ ವಲಯಕ್ಕೆ ಸಾಲದ ಹರಿವನ್ನು ಹೆಚ್ಚಿಸುವುದು.

* ಹಳೆಯದಾಗಿರುವ ಅಪ್ರಸ್ತುತ ಕಾನೂನುಗಳ ರದ್ದತಿ, ಸಂಪನ್ಮೂಲಗಳ ಸಮರ್ಪಕ ಹಂಚಿಕೆ.

*ಇದೇ ಮೇ ತಿಂಗಳಿನಲ್ಲಿ ನಡೆಯುವ ಗ್ಲೋಬಲ್ ಎಂಎಸ್ಎಂಇ ಶೃಂಗಸಭೆ–2026 ರ ಆಯೋಜನೆಗೆ ₹2.24 ಕೋಟಿ ಅನುದಾನ ಮಂಜೂರು ಮಾಡಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.