ಬೆಂಗಳೂರು: ‘ಸರ್ಕಾರದ ಖಜಾನೆ ಖಾಲಿಯಾಗಿದ್ದು, ಪ್ರವಾಹ ಪೀಡಿತ ಪ್ರದೇಶದ ಸಂತ್ರಸ್ತರಿಗೆ ಪರಿಹಾರ ನೀಡಲು ಹಣವಿಲ್ಲ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತ್ರಸ್ತರಿಗೆ ಈವರೆಗೂ ಪರಿಹಾರ ಘೋಷಿಸಿಲ್ಲ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ದೂರಿದ್ದಾರೆ.

‘ಪ್ರವಾಹ ಪೀಡಿತ ಪ್ರದೇಶದ ಜನ ಸಂಕಷ್ಟದಿಂದ ತತ್ತರಿಸುತ್ತಿದ್ದರೂ ಪರಿಹಾರ ಘೋಷಿಸದೇ ವೈಮಾನಿಕ ಸಮೀಕ್ಷೆಗೆ ಹೊರಟಿದ್ದು ಸರಿ? ಬೊಕ್ಕಸದಲ್ಲಿ ಹಣ ಇಲ್ಲದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಕಿಡಿಕಾರಿದರು.

‘ಪ್ರವಾಹ ಪರಿಸ್ಥಿತಿಯನ್ನು ವೀಕ್ಷಿಸಲು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಎಲ್ಲ ರಸ್ತೆಗಳು ಗುಂಡಿ ಬಿದ್ದಿರುವುದರಿಂದ ಮತ್ತು ಜನ ಸಿಟ್ಟಿಗೆದ್ದು ಪ್ರತಿಭಟನೆ ನಡೆಸುತ್ತಾರೆ ಎಂದು ಹೆಲಿಕಾಪ್ಟರ್ ಹತ್ತಿದ್ದಾರೆ’ ಎಂದು ಅವರು ವ್ಯಂಗ್ಯವಾಗಿ ನುಡಿದರು.

ಪರಿಹಾರ ಕಾರ್ಯಕ್ಕೆ ಮುಖ್ಯಮಂತ್ರಿಯವರು ಸಚಿವರ ತಂಡ ರಚಿಸಬೇಕಿತ್ತು. ಅಧಿಕಾರಿಗಳ ಸಭೆ ಕರೆದು ನೋಡಲ್ ಅಧಿಕಾರಿಗಳನ್ನು ನಿಯೋಜಿಸಬೇಕಿತ್ತು. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾಗಿ ಆಹಾರ ವಿತರಿಸಲಾಗುತ್ತಿದೆಯೆ ಎಂದು ಪರಿಶೀಲಿಸಬೇಕಿತ್ತು. ಏನೂ ಮಾಡದೆ ಸಮೀಕ್ಷೆ ಮಾಡಲಾಗುತ್ತಿದೆ. ಈ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಅಶೋಕ ಟೀಕಿಸಿದರು.

ಅಕ್ಟೋಬರ್ ಕ್ರಾಂತಿ: ‘ಕಾಂಗ್ರೆಸ್ನಲ್ಲಿ ‘ಅಕ್ಟೋಬರ್ ಕ್ರಾಂತಿ’ಯಾಗುವ ಲಕ್ಷಣಗಳಿದ್ದು, ಕ್ರಾಂತಿಯ ನಂತರ ಮುಖ್ಯಮಂತ್ರಿ ಬದಲಾವಣೆಯಾಗುವ ಲಕ್ಷಣವಿದೆ’ ಎಂದು ಆರ್.ಅಶೋಕ ಹೇಳಿದರು.

‘ಸರ್ಕಾರ ಅಸ್ಥಿರಗೊಂಡು ಬಿದ್ದುಹೋದರೆ ಹೊಸದಾಗಿ ಚುನಾವಣೆ ನಡೆಸುವುದೇ ಸೂಕ್ತ. ನಾವು ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹೋಗುವುದಿಲ್ಲ. ಎರಡೂವರೆ ವರ್ಷಗಳಲ್ಲಿ ಸರ್ಕಾರ ಟೇಕಾಫ್ ಆಗಿಲ್ಲ. ಇಂತಹ ಪರಿಸ್ಥಿಯಲ್ಲಿ ಚುನಾವಣೆ ನಡೆಸುವುದೇ ಸೂಕ್ತ’ ಎಂದು ಹೇಳಿದರು.

ರಾಜ್ಯ ಮನವಿಯನ್ನೇ ಸಲ್ಲಿಸಿಲ್ಲ: ಎಚ್ಡಿಕೆ ‘ಪರಿಹಾರ ನೀಡುವಂತೆ ಸಿದ್ದರಾಮಯ್ಯ ಅವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಎಲ್ಲಿ ಸಲ್ಲಿಸಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು ‘ರಾಜ್ಯದ ಯಾವ ಸಚಿವ ಅಥವಾ ಅಧಿಕಾರಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರನ್ನು ಭೇಟಿ ಮಾಡಿಲ್ಲ. ರಾಜ್ಯದ ಯಾವ ಸಚಿವರೂ ನನ್ನನ್ನು ಈ ವಿಚಾರವಾಗಿ ಸಂಪರ್ಕಿಸಿಲ್ಲ. ಪರಿಹಾರ ನೀಡುವಂತೆ ಮನವಿಯನ್ನೂ ಸಲ್ಲಿಸಿಲ್ಲ’ ಎಂದು ದೂರಿದರು.

‘ಸುಮ್ಮನೆ ಕೇಂದ್ರ ಸರ್ಕಾರವನ್ನು ಬೈಯುವುದರಿಂದ ಪ್ರಯೋಜನವಿಲ್ಲ. ದೆಹಲಿಗೆ ಬಂದು ಕೇಂದ್ರ ಸರ್ಕಾರದ ಪ್ರತಿನಿಧಿಗಳ ಜತೆ ಮಾತನಾಡಿ ಮನವಿ ಸಲ್ಲಿಸಲಿ. ರಾಜ್ಯದಲ್ಲಿನ ಪ್ರವಾಹ ಮತ್ತು ಅದರಿಂದಾಗಿರುವ ನಷ್ಟದ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿಕೊಡಿ. ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ನಂಬಿಕೆ ಇಡಿ. ನಿಮ್ಮ ಸಚಿವರ ತಂಡವನ್ನು ಕಳುಹಿಸಿ. ಸರಿಯಾದ ರೀತಿಯಲ್ಲಿ ಮನವಿ ಕೊಟ್ಟು ಪರಿಹಾರ ಕೇಳಿದರೆ ಕೇಂದ್ರದ ನೆರವು ಸಿಗುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.