ಕಾರವಾರ: ಜನಪದ ಹಾಡುಗಳನ್ನು ಹಾಡುವ ಜೊತೆಗೆ ಮದ್ಯಪಾನ ವಿರೋಧಿ ಹೋರಾಟದಿಂದ ಖ್ಯಾತಿಗಳಿಸಿದ್ದ ಅಂಕೋಲಾ ತಾಲ್ಲೂಕು ಬಡಗೇರಿಯ ಸುಕ್ರಿ ಬೊಮ್ಮಗೌಡ (88) ಗುರುವಾರ ನಸುಕಿನ ಜಾವ ಸ್ವಗೃಹದಲ್ಲಿ ನಿಧನರಾದರು.

ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಮೂರು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಮನೆಗೆ ಮರಳಿದ್ದ ಅವರು ಚೇತರಿಸಿಕೊಂಡಿದ್ದರು. ರಾತ್ರಿವರೆಗೆ ಕುಟುಂಬ ಸದಸ್ಯರೊಂದಿಗೆ ಚರ್ಚೆ ನಡೆಸಿದ್ದರು. ನಸುಕಿನ ಜಾವ ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸುಕ್ರಜ್ಜಿ ಎಂದೇ ಖ್ಯಾತರಾಗಿದ್ದ ಅವರು ಹಾಲಕ್ಕಿ ಜನಪದ ಹಾಡುಗಳನ್ನು ಹಾಡುವ ಮೂಲಕ ಚಿರಪರಿಚಿತರಾಗಿದ್ದರು. ಬಡಗೇರಿ ಗ್ರಾಮದಲ್ಲಿ ಮದ್ಯ ಮಾರಾಟ ಹಾವಳಿ ಹೆಚ್ಚಿದ್ದರಿಂದ ಅದನ್ನು ತಡೆಯಲು ಹಲವು ದಶಕಗಳ ಹಿಂದೆ ಜನಾಂದೋಲನ ನಡೆಸಿದ್ದರು.

1999ರಲ್ಲಿ ಜನಪದಶ್ರೀ ಪ್ರಶಸ್ತಿ, 2006ರಲ್ಲಿ ನಾಡೋಜ ಪ್ರಶಸ್ತಿ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಅವರು ಭಾಜನರಾಗಿದ್ದರು.
.ಸುಕ್ರಿ ಬೊಮ್ಮಗೌಡ, ಪ್ರಸನ್ನಗೆ ‘ಬಂಗಾರ’ ಪ್ರಶಸ್ತಿ ಪ್ರದಾನ.ಸುಕ್ರಜ್ಜಿಯ ಪದಗಳ ಹದದೊಳಗೆ.. ಸುಕ್ರಿ ಬೊಮ್ಮ ಗೌಡ ಜೊತೆ ಆಪ್ತ ಮಾತು– ವಿಶೇಷ ಲೇಖನ.ಪದ್ಮಶ್ರೀ ಪುರಸ್ಕೃತ ಸುಕ್ರಜ್ಜಿಗೆ ಸ್ಟಂಟ್ ಅಳವಡಿಕೆ.ಉಸಿರಾಟದ ಸಮಸ್ಯೆ; ಜಾನಪದ ಗಾಯಕಿ ‘ಸುಕ್ರಜ್ಜಿ’ ಆಸ್ಪತ್ರೆಗೆ ದಾಖಲು.ಸುಕ್ರಜ್ಜಿ ಆರೋಗ್ಯದಲ್ಲಿ ಚೇತರಿಕೆ: ಮನೆಯಲ್ಲೇ ಚಿಕಿತ್ಸೆ.ಜಾನಪದ ಗಾಯಕಿ ‘ಸುಕ್ರಜ್ಜಿ’ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.