ಯಲಹಂಕ: ‘ಬಡತನದಿಂದ ಶೋಷಣೆಗೆ ಒಳಗಾಗಿ ಕಷ್ಟದ ಜೀವನ ನಡೆಸಿದರೂ ಸಹ ಪರಿಶ್ರಮ ಮತ್ತು ಕಠಿಣ ವಿದ್ಯಾಭ್ಯಾಸದ ಮೂಲಕ ಭಾರತದ 140 ಕೋಟಿ ಜನರ ಹಕ್ಕುಗಳನ್ನು ರಕ್ಷಣೆಮಾಡುವ, ವಿಶ್ವದಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ನೀಡಿದ ಮಹಾಪುರಷ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಹೆಬ್ಬಾಳದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯ (ಬೀದರ) ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬೋಧಕ-ಬೋಧಕೇತರ ನೌಕರರ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತ್ಯುತ್ಸವ ಹಾಗೂ ತಾಂತ್ರಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನವನ್ನು ಎಲ್ಲರೂ ಒಪ್ಪಿಕೊಂಡು ಅಳವಡಿಸಿಕೊಂಡಿದ್ದೇವೆ. ಪ್ರತಿಯೊಬ್ಬರೂ ಇದರಲ್ಲಿ ಅಡಕವಾಗಿರುವ ಅಂಶಗಳು ಹಾಗೂ ಮೌಲ್ಯಗಳನ್ನು ಪಾಲಿಸಬೇಕಾದುದು ಅತ್ಯಗತ್ಯ ಎಂದರು.

ಈ ವೇಳೆ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಂವಿಧಾನದ ಪೀಠಿಕೆ ವಾಚಿಸಲಾಯಿತು. ಇದೇ ಸಂದರ್ಭದಲ್ಲಿ ಎಸ್ಸಿಎಸ್ಪಿ-ಟಿಎಸ್ಪಿ ಅನುದಾನದಡಿಯಲ್ಲಿ ಎಸ್ಸಿ. ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದರು. ಅಂಬೇಡ್ಕರ್ ಕುರಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಸಿ.ವೀರಣ್ಣ, ಕುಲಸಚಿವ ಪಿ.ಟಿ.ರಮೇಶ್, ವ್ಯವಸ್ಥಾಪಕ ಮಂಡಳಿ ಸದಸ್ಯರಾದ ವೆಂಕಟಾಚಲ.ವಿ.ಎಸ್, ಸಂಗಪ್ಪ ದೊಡ್ಡಬಸಪ್ಪ ವಾಲಿಕಾರ, ಬಸವರಾಜ.ಪಿ ಭತಮುರ್ಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ನೌಕರರ ಸಂಘದ ಅಧ್ಯಕ್ಷ ರವಿಕುಮಾರ್.ಸಿ, ಜಂಟಿ ಕಾರ್ಯದರ್ಶಿ ಚಂದ್ರಶೇಖರ್.ಕೆ,ಸದಸ್ಯರಾದ ಎನ್.ಎಂ.ಶ್ರೀನಿವಾಸಮೂರ್ತಿ, ಭೋಜರಾಜ್, ವೇಣುಗೋಪಾಲ್, ಎಸ್.ಸಿ.ಎಸ್.ಟಿ ಕೋಶದ ನಿರ್ದೇಶಕ ಗಂಗಾನಾಯ್ಕ.ಎಸ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.