ಬೆಂಗಳೂರು: ‘ಮಹಾತ್ಮಾ ಗಾಂಧೀಜಿ ಪ್ರತಿಪಾದಿಸಿದ ತತ್ವ, ಸಿದ್ಧಾಂತಗಳ ಪಾಲನೆ ಮಾಡಬೇಕು. ಗಾಂಧೀಜಿ ಸ್ವಾವಲಂಬನೆ ಜೀವನ ತೋರಿಸಿಕೊಟ್ಟವರು. ದೇಶವನ್ನು ರಾಜಕೀಯ ದಾಸ್ಯದಿಂದ ಮುಕ್ತಿಗೊಳಿಸಿದವರು. ಅವರು ಪ್ರತಿಪಾದಿಸಿದ ಸಿದ್ಧಾಂತ ಪಾಲಿಸುವುದೇ ನಮ್ಮ ಜೀವನದ ಗುರಿಯಾಗಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಶಿಸಿದರು.

ಮಹಾತ್ಮ ಗಾಂಧಿ ಹುತಾತ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿ ಶನಿವಾರ ಎರಡು ನಿಮಿಷಗಳ ಕಾಲ ಮೌನಾಚರಣೆ ಬಳಿಕ ಅವರು ಮಾತನಾಡಿದರು.

‘ದೇಶದಾದ್ಯಂತ ಇಂದು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಮಾಡಿಕೊಳ್ಳುವ ಕಾರ್ಯಕ್ರಮ. ನಮ್ಮೆಲ್ಲ ಸಚಿವರು ಸೇರಿ ಗಾಂಧೀಜಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಭಾವನೆಗಳನ್ನು ವ್ಯಕ್ತಪಡಿಸಿದ್ದೇವೆ’ ಎಂದರು.

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕಂದಾಯ ಸಚಿವ ಆರ್. ಅಶೋಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಂಕುಸ್ಥಾಪನೆ: ಬಳಿಕ ವಿಧಾನಸೌಧದದ ಸಮಿತಿ ಕೊಠಡಿಯಲ್ಲಿ ವರ್ಚುವಲ್ ಮುಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ನಿಲಯ ಸ್ಥಾಪನೆಗೆ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು.

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಸುರೇಶ್ ಕುಮಾರ್, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿ, ಮೋಹನ್ ಕೊಂಡಜ್ಜಿ, ತೇಜಸ್ವಿನಿ ರಮೇಶ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.