ಬೆಂಗಳೂರು: ಆಹಾರ ಪದಾರ್ಥಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕಾರಿಗಳು ರಾಜ್ಯದ 753 ಕಡೆ ಶುಕ್ರವಾರ ತಪಾಸಣೆ ನಡೆಸಿದರು.
ಆಹಾರ ಪದಾರ್ಥಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಇಲಾಖೆಯು ವಿಶೇಷ ಆಂದೋಲನ ಹಮ್ಮಿಕೊಂಡಿದೆ. ಇದರ ಭಾಗವಾಗಿ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಹಾಗೂ ಬೀದಿ ಬದಿಯಲ್ಲಿನ ತಿನಿಸುಗಳನ್ನು ತಪಾಸಣೆ ನಡೆಸಿ, ಮಾದರಿಗಳನ್ನು ಸಂಗ್ರಹಿಸಲಾಯಿತು.
‘ಸಂಗ್ರಹಿಸಿದ ಮಾದರಿಗಳನ್ನು ವಿಶ್ಲೇಷಣೆಗೆ ಒಳಪಡಿಸಲಾಗುತ್ತದೆ. ವರದಿ ಬಂದ ನಂತರ ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.