ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ‘ಇಂಡಿಯಾ’‌ ಮಿತ್ರ ಪಕ್ಷಗಳ ಸಮಿತಿ ರಚನೆ

Published 8 ಏಪ್ರಿಲ್ 2024, 15:55 IST
Last Updated 8 ಏಪ್ರಿಲ್ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಪರಸ್ಪರ ಸಹಕಾರದಿಂದ ಕೆಲಸ ಮಾಡಲು ರಾಜ್ಯದಲ್ಲಿಯೂ ಕಾಂಗ್ರೆಸ್‌ ನೇತೃತ್ವದಲ್ಲಿ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳ ರಾಜ್ಯಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ.

ರಾಜ್ಯಸಭೆಯ ಕಾಂಗ್ರೆಸ್‌ ಸದಸ್ಯ ಜಿ.ಸಿ. ಚಂದ್ರಶೇಖರ್‌ ಅವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಸಂಚಾಲಕರು.

ಉಳಿದಂತೆ, ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್‌, ಸಿಪಿಎಂ ಕಾರ್ಯದರ್ಶಿ ಬಸವರಾಜು, ಆಮ್‌ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಚಿತ್‌ ಸಹಾನಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಮಂಜಪ್ಪ ಯಾದವ್, ಡಿಎಂಕೆ ಕಾರ್ಯದರ್ಶಿ ರಾಮಸ್ವಾಮಿ ನಟೇಶನ್‌, ಎನ್‌ಸಿಪಿ (ಶರದ್ ಪವಾರ್ ಬಣ) ಅಧ್ಯಕ್ಷ ಸಿ.ಎಂ. ಇನಾಂದಾರ್‌, ಸಿಪಿಐ (ಎಂಎಲ್‌) ಕಾರ್ಯದರ್ಶಿ ಕ್ಲಿಫ್ಟನ್‌ ಡಿ. ರೊಜೆರಿಯೊ, ಫಾರ್ವರ್ಡ್‌ ಬ್ಲಾಕ್‌ ಕಾರ್ಯದರ್ಶಿ ಜಿ.ಆರ್. ಶಿವಶಂಕರ್, ಐಯುಎಂಎಲ್‌ ಅಧ್ಯಕ್ಷ ಜಾವಿದುಲ್ಲಾ ಸಮಿತಿಯ ಸದಸ್ಯರು.

‘ಪರಸ್ಪರ ಹೊಂದಾಣಿಕೆ ಮತ್ತು ಒಟ್ಟಾಗಿ ಚುನಾವಣೆ ನಡೆಸುವ ದೃಷ್ಟಿಯಿಂದ ಕೆಳಹಂತದಲ್ಲಿ ಮಿತ್ರ ಪಕ್ಷಗಳೊಂದಿಗೆ ಸಮನ್ವಯ ಸಮಿತಿ ರಚಿಸಿಕೊಳ್ಳಬೇಕು’ ಎಂದು ಡಿಸಿಸಿ ಅಧ್ಯಕ್ಷರು ಮತ್ತು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೂಚನೆ ನೀಡಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT