ಬೆಂಗಳೂರು: ಮೂರೂವರೆ ವರ್ಷದ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಬೆಂಗಳೂರಿನ ಫ್ರೆಂಚ್ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಪಾಸ್ಕಲ್ ಮಝುರಿಯರ್ ಅವರನ್ನು ಖುಲಾಸೆಗೊಳಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ADVERTISEMENT
ADVERTISEMENT
ಈ ಸಂಬಂಧ ಮಝುರಿಯರ್ ಪತ್ನಿ ಸುಜಾ ಜೋನ್ಸ್ ಮಝುರಿಯರ್ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ತೀರ್ಪು ನೀಡಿದೆ.
‘ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸುತ್ತಿರುವ ಸಮಯದಲ್ಲಿ ಮಕ್ಕಳೊಂದಿಗೆ ದೇಶ ಬಿಟ್ಟು ಹೋಗುವುದನ್ನು ತಡೆಯಲು ಸುಜಾ ತಮ್ಮ ಪತಿ ವಿರುದ್ಧ ಸುಳ್ಳು ಆರೋಪ ಹೊರಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ’ ಎಂಬ ವಿಚಾರಣಾ ನ್ಯಾಯಾಲಯದ ಅಭಿಪ್ರಾಯವನ್ನು ನ್ಯಾಯಪೀಠ ಪರಿಗಣಿಸಿದೆ.
‘ನನ್ನ ಪತಿ 2010ರ ಏಪ್ರಿಲ್, 2012ರ ಮೇ ಮತ್ತು 2012ರ ಜೂನ್ ತಿಂಗಳಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಸುಜಾ ಆರೋಪಿಸಿದ್ದರು.