ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ದೋಷಿ ಎಂದು ವಿಚಾರಣಾ ನ್ಯಾಯಾಲಯದಿಂದ ನಿರ್ಣಯಗೊಂಡಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, "ನನ್ನ ರಾಜಕೀಯ ಜೀವನ ಮತ್ತು ಭವಿಷ್ಯ ಹಾಳುಮಾಡಲು ಸಂಚು ರೂಪಿಸಿ ಈ ಪ್ರಕರಣವನ್ನು ದಾಖಲಿಸಲಾಗಿದೆ' ಎಂದು ವಿಚಾರಣಾ ನ್ಯಾಯಾಲಯಕ್ಕೆ ಅಲವತ್ತುಕೊಂಡರು.

ಪ್ರಕರಣದ ವಿಚಾರಣೆ ನಡೆಸಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಮಾನಿಸಿರುವ, "ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ" ನಡೆಸುವ ವಿಶೇಷ ನ್ಯಾಯಾಲಯ ಶನಿವಾರ ಶಿಕ್ಷೆಯ ಪ್ರಮಾಣವನ್ನು ನಿಗದಿಪಡಿಸಬೇಕಿದ್ದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣನನ್ನು ಶನಿವಾರ ಬೆಳಿಗ್ಗೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು.

ಈ ವೇಳೆ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ, ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡುವಂತೆ ಪ್ರಜ್ವಲ್ ಮನವಿ ಮಾಡಿದರು.

"2024ರ ಪಾರ್ಲಿಮೆಂಟ್ ಚುನಾವಣೆಯ ಮತದಾನಕ್ಕೆ 6 ದಿನ ಬಾಕಿ ಇದೆ ಎನ್ನುವಾಗ ನನ್ನ ವಿರುದ್ಧ ದೂರು ದಾಖಲು ಮಾಡಲಾಯಿತು. ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಈ ರೀತಿ ಮಾಡಲಾಗಿದೆ" ಎಂದು ಪ್ರತಿಪಾದಿಸಿದರು.

"ನಾನು ನನ್ನ ತಂದೆ ತಾಯಿಯ ಮುಖ ನೋಡಿ 6 ತಿಂಗಳಾಗಿದೆ" ಎಂದು ಕಣ್ಣೀರಿಟ್ಟರು.

ಇದಕ್ಕೆ ನ್ಯಾಯಾಧೀಶರು, "ನಿಮ್ಮ ವಿದ್ಯಾರ್ಹತೆ ಏನು ಪ್ರಶ್ನಿಸಿದರು. ಉತ್ತರಿಸಿದ ಪ್ರಜ್ವಲ್, "ಬಿ.ಇ ಇನ್ ಮೆಕ್ಯಾನಿಕಲ್" ಎಂದು ಉತ್ತರಿಸಿದರು.

ಇದೇ ವೇಳೆ ಪ್ರಜ್ವಲ್ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲೆ ನಳಿನಾ ಮಾಯೇಗೌಡ, "ಪ್ರಜ್ವಲ್ ರೇವಣ್ಣ ಅವರ ತಾತ ಮಾಜಿ ಪ್ರಧಾನಿ. ಚುನಾವಣೆ ಸಂದರ್ಭದಲ್ಲಿ ಆರೋಪದ ವಿಡಿಯೋ ವೈರಲ್ ಮಾಡಲಾಗಿದೆ. ಇದರ ಹಿಂದೆ

ರಾಜಕೀಯ ದುರುದ್ದೇಶ ಅಡಗಿದೆ. ಸಂತ್ರಸ್ತ ಮಹಿಳೆಯ ಸಾಮಾನ್ಯ ಜೀವನಕ್ಕೆ ಯಾವುದೇ ತೊಂದರೆ ಆಗಿಲ್ಲ. ಇಂತಹ ಯುವ ರಾಜಕಾರಣಿಯನ್ನು ಜೀವನ ಪರ್ಯಂತ ಜೈಲಿನಲ್ಲಿ ಇಡುವುದು ಸರಿಯಲ್ಲ. ಹೀಗಾಗಿ, ಕನಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕು" ಎಂದು ಮನವಿ ಮಾಡಿದರು.

ಇದನ್ನು ಆಲಿಸಿದ ನ್ಯಾಯಾಧೀಶರು ಮಧ್ಯಾಹ್ನ 2.45ಕ್ಕೆ ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.