ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡಿನೋವು ಚಿಕಿತ್ಸೆಗೆ ಹೋದಾಗ ಹೃದಯ ಕಾಯಿಲೆ ಪತ್ತೆ: ಬೊಮ್ಮಾಯಿಗೆ ಶಸ್ತ್ರಚಿಕಿತ್ಸೆ

Published 17 ಅಕ್ಟೋಬರ್ 2023, 13:01 IST
Last Updated 17 ಅಕ್ಟೋಬರ್ 2023, 13:01 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮಂಡಿಶಸ್ತ್ರ ಚಿಕಿತ್ಸೆಗಾಗಿ ಅವರು ಸೋಮವಾರ ಹೋದ ಸಂದರ್ಭದಲ್ಲಿ ಹೃದಯದಲ್ಲಿ ಬ್ಲಾಕೇಜ್‌ ಇರುವುದು ಕಂಡುಬಂದಿತ್ತು. ಬಳಿಕ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾದರು. ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಈ ಕುರಿತು ‘ಎಕ್ಸ್‌’(ಟ್ವೀಟ್‌) ಮಾಡಿರುವ ಬೊಮ್ಮಾಯಿ, ‘ನನಗೆ ಲಘು ಶಸ್ತ್ರ ಚಿಕಿತ್ಸೆ ಆಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆ ನನ್ನನ್ನು ನೋಡಲು ಬಂದರೆ, ಇಲ್ಲಿರುವ ಇತರೆ ರೋಗಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಯಾರೂ ಆಸ್ಪತ್ರೆಗೆ ಬರಬಾರದು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT