ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕ ಸಿ.ಎಂ.ನಿಂಬಣ್ಣವರ ನಿಧನ

Published 9 ಜುಲೈ 2023, 8:41 IST
Last Updated 9 ಜುಲೈ 2023, 8:41 IST
ಅಕ್ಷರ ಗಾತ್ರ

ಬೆಂಗಳೂರು: ಧಾರವಾಡ ಜಿಲ್ಲೆ ಕಲಘಟಗಿಯ ಕ್ಷೇತ್ರದ ಮಾಜಿ ಶಾಸಕ ಬಿಜೆಪಿಯ ಸಿ.ಎಂ.ನಿಂಬಣ್ಣವರ (76) ಭಾನುವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪುತ್ರ ಹಾಗೂ ಪುತ್ರಿ ಇದ್ದಾರೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಲಘಟಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂತೋಷ ಲಾಡ್ ವಿರುದ್ಧ ಗೆಲುವು ಸಾಧಿಸಿ ಮೊದಲ ಬಾರಿಗೆ ಶಾಸಕರಾಗಿದ್ದರು. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು.

ಶಿಕ್ಷಕ ಹಾಗೂ ವಕೀಲಿ ವೃತ್ತಿಯ ಅನುಭವ ಹೊಂದಿದ್ದ ನಿಂಬಣ್ಣವರ ಅವರು 1995ರಲ್ಲಿ ಬಿಜೆಪಿ ಸೇರಿದ್ದರು. ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿದ್ದರು. ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದರು. ಲಿಂಗಾಯತ ಸಮಾಜದ ಮುಖಂಡರಾಗಿದ್ದ ಅವರು ಶಿವಪ್ಪಣ್ಣ ಜಿಗಳೂರು ಶಿಕ್ಷಣ ಸಂಸ್ಥೆ ಆರಂಭಿಸಿದ್ದರು.

ಮೃತರ ಅಂತ್ಯಕ್ರಿಯೆ ಕಲಘಟಗಿಯಲ್ಲಿ ಸೋಮವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT