ಬೆಂಗಳೂರು: ವಿರಾಜಪೇಟೆಯ ಮಾಜಿ ಶಾಸಕ ಎಚ್.ಡಿ. ಬಸವರಾಜು ಶುಕ್ರವಾರ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲೇ ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಪಕ್ಷದ ಧ್ವಜ ನೀಡುವ ಮೂಲಕ ಬಸವರಾಜು ಅವರನ್ನು ಬರಮಾಡಿಕೊಂಡರು. ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಹಲವು ಮುಖಂಡರು ಉಪಸ್ಥಿತರಿದ್ದರು.

ಬಸವರಾಜು 1994 ಮತ್ತು 2004ರಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ದೆಹಲಿಗೆ ತೆರಳಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ಅವರು, ‘ಎರಡೂ ಕಡೆಗಳಲ್ಲಿ ನಮ್ಮದೇ ಬಿಜೆಪಿ ಸರ್ಕಾರ ಇದೆ. ರಾಜ್ಯದಲ್ಲಿ, ಕೇಂದ್ರದಲ್ಲಿ ಎರಡೂ ಕಡೆಗಳಲ್ಲಿ ಆಡಳಿತವಿದ್ದರೂ, ಜನಪರ ಕೆಲಸ ಮಾಡುತ್ತಿಲ್ಲ. ಭ್ರಷ್ಟಾಚಾರ ಹೆಚ್ಚಾಗಿದ್ದು, ರೋಸಿ ಹೋಗಿದ್ದೇನೆ. ಜನಪರವಾದ ಕೆಲಸ ಮಾಡಬಲ್ಲ ಭರವಸೆಯನ್ನು ಆಮ್ ಆದ್ಮಿ ಪಕ್ಷದಲ್ಲಿ ಕಂಡಿದ್ದೇನೆ. ಈ ಕಾರಣದಿಂದ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷ ಸೇರಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.