ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ಕೋವಿಡ್–19 ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ.

ಸದ್ಯ ದೇವೇಗೌಡರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ. ಅವರ ಆರೋಗ್ಯ ಸ್ಥಿರವಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಕರೆ ಮಾಡಿ ದೇವೇಗೌಡರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದೂ ಮೂಲಗಳು ಹೇಳಿವೆ.

‘ಮಾಜಿ ಪ್ರಧಾನಮಂತ್ರಿಗಳು, ಹಿರಿಯರಾದ ಎಚ್.ಡಿ.ದೇವೇಗೌಡ ಅವರು ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಓದಿ... 32ನೇ ವಸಂತಕ್ಕೆ ಕಾಲಿಟ್ಟ ನಿಖಿಲ್: ಎಚ್ಡಿಕೆ ಸೇರಿ ಅಭಿಮಾನಿಗಳಿಂದ ಶುಭ ಹಾರೈಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.