ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅರ್ಜುನ ಆನೆಯ ಸ್ಮಾರಕಕ್ಕೆ ಜುಲೈನಲ್ಲಿ ಶಿಲಾನ್ಯಾಸ: ಖಂಡ್ರೆ

Published 21 ಜೂನ್ 2024, 0:30 IST
Last Updated 21 ಜೂನ್ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ ಡಿ. 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ಮೃತಪಟ್ಟ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜುಲೈನಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಸಫಾರಿಗಾಗಿ ವಿಶೇಷ ವಿನ್ಯಾಸದೊಂದಿಗೆ ಸಿದ್ಧವಾಗಿರುವ ಮೂರು ಹೊಸ ಮಿನಿ ಬಸ್‌ಗಳಿಗೆ ಗುರುವಾರ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ‘ಹಾಸನ ಜಿಲ್ಲೆ ಯಸಳೂರು ಬಳಿ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಮತ್ತು ಅರ್ಜುನನ ಆವಾಸಸ್ಥಾನವಾಗಿದ್ದ, ನಾಗರಹೊಳೆಯ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುವುದು’ ಎಂದರು.

‘ಎರಡೂ ಸ್ಮಾರಕಗಳಲ್ಲಿ ಅರ್ಜುನನ ಪ್ರತಿಕೃತಿ ಪ್ರತಿಷ್ಠಾಪಿಸಲಾಗುವುದು. ಜೊತೆಗೆ ಚಿನ್ನದ ಅಂಬಾರಿ ಹೊತ್ತ ಅರ್ಜುನನ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಚಿತ್ರಗಳನ್ನು ಅಳವಡಿಸುವ ಮೂಲಕ ಜನರ ಮನದಲ್ಲಿ ಅರ್ಜುನನ ಸಾಹಸ, ಸೇವೆ, ಕೊಡುಗೆ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು. ಆರು ತಿಂಗಳ ಒಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ’ ಎಂದರು.

ಅರಣ್ಯ ಪ್ರದೇಶ ಪ್ಲಾಸ್ಟಿಕ್ ಮುಕ್ತ ಮಾಡಲು ಸೂಚನೆ: ರಾಜ್ಯದ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ಎಲ್ಲ ಅರಣ್ಯ ಪ್ರದೇಶವನ್ನು ಸಂಪೂರ್ಣ ಪ್ಲಾಸ್ಟಿಕ್ ಮುಕ್ತಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಹುಲಿ ಸಂರಕ್ಷಣಾ ಪ್ರತಿಷ್ಠಾನದ 15ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ವನ್ಯಜೀವಿಗಳ ಪ್ರಾಣಕ್ಕೆ ಪ್ಲಾಸ್ಟಿಕ್ ಕುತ್ತು ತರುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT