ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜುಗಳ ನಾಲ್ವರು ವಿದ್ಯಾರ್ಥಿಗಳು ಜಪಾನ್ನಲ್ಲಿ ಮೇ 24ರಿಂದ 30ರವರೆಗೆ ನಡೆಯುವ ‘ಸಕುರಾ ಸೈನ್ಸ್ ಪ್ರೋಗ್ರಾಂ–2026’ಕ್ಕೆ ಆಯ್ಕೆಯಾಗಿದ್ದಾರೆ.

ಶೃಂಗೇರಿಯ ಆಶ್ವಿತಾ ಕೆ.ಎಚ್, ಕೆ.ಆರ್.ನಗರ ನಮ್ರತಾ ಬೈ, ಅರಸೀಕೆರೆಯ ರೋಹಿತ್ ಡಿ.ಎಸ್ ಹಾಗೂ ಕುಮಟಾದ ಆಕಾಶ ಉದಯ ಹರಿಕಾಂತ್ ಅವರು ದೇಶದ 15 ರಾಜ್ಯಗಳಿಂದ ಆಯ್ಕೆಯಾದ 56 ವಿದ್ಯಾರ್ಥಿಗಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್ಎಸ್ಎಲ್ಸಿ ಪೂರ್ಣಗೊಳಿಸಿ, ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಕೇಂದ್ರ ಸರ್ಕಾರ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಭಾರತ ಸೇರಿದಂತೆ ಘಾನಾ, ನೈಜೀರಿಯಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ವಿದ್ಯಾರ್ಥಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಭಾರತದಿಂದ ಅಸ್ಸಾಂ, ದಾದ್ರಾ ಮತ್ತು ನಗರ ಹವೇಲಿ ಹಾಗೂ ದಮನ್–ದಿಯು, ಗೋವಾ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.