ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಶಿಫಾರಸಿನಂತೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ನಾಲ್ಕು ವರ್ಷದ ಪದವಿ ಕೋರ್ಸುಗಳನ್ನು ಆರಂಭಿಸುವಂತೆ ಕುಲಪತಿಗಳಿಗೆ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಲಹೆ ನೀಡಿದ್ದಾರೆ.

2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಯ ಬಗ್ಗೆ ಎಲ್ಲ ಕುಲಪತಿಗಳ ಜತೆ ಮಂಗಳವಾರ ಅವರು ವರ್ಚುಯಲ್ ಚರ್ಚೆ ನಡೆಸಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್ ಕಾರಣಕ್ಕೆ ಪ್ರಸಕ್ತ ವರ್ಷದಲ್ಲಿ ಪಿಯುಸಿ ವಿದ್ಯಾರ್ಥಿಗಳೆಲ್ಲರೂ ಪಾಸಾಗಿದ್ದಾರೆ. ವಿವಿಧ ಕೋರ್ಸುಗಳಿಗೆ ಬೇಡಿಕೆ ಬರುತ್ತಿದೆ. ನಾಲ್ಕು ವರ್ಷದ ಪದವಿ ತರಗತಿಗಳನ್ನು ಆರಂಭಿಸುವ ಮೂಲಕ ವಿಶ್ವವಿದ್ಯಾಲಯಗಳು ಪದವಿ ವ್ಯಾಸಂಗದ ಅಭಿಲಾಶೆಯುಳ್ಳ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲು ಕುಲಪತಿಗಳಿಗೆ ಸೂಚಿಸಲಾಗಿದೆ’ ಎಂದರು.

ಕೋವಿಡ್ ಲಸಿಕೆಯಿಂದ ಸಾವು: ಮೊದಲ ಸಾವು ದೃಢಪಡಿಸಿದ ಸರ್ಕಾರ

ಸಮಿತಿ ರಚನೆ: ‘ಈ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದಕ್ಕೆ ಸೂಕ್ತವಾದ ಕಾರ್ಯ ಚೌಕಟ್ಟು ರೂಪಿಸಲು ವಿಷಯವಾರು ಸಮಿತಿ ರಚನೆ ಮಾಡುವಂತೆ ಕುಲಪತಿಗಳಿಗೆ ಸೂಚನೆ ನೀಡಲಾಗಿದೆ. ಜುಲೈ 15ರೊಳಗೆ ಈ ಸಮಿತಿಗಳು ವರದಿಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ’ ಎಂದು ಅವರು ಹೇಳಿದರು.

‘ವಿದ್ಯಾರ್ಥಿಗಳು ಆನ್‌ಲೈನ್ ಮತ್ತು ಆಫ್‌ಲೈನ್‌ಲ್ಲಿ ಕಲಿಯಲು ಅವಕಾಶ ಇರಲೇಬೇಕು. ಅದಕ್ಕೆ ಬೇಕಾದ ಎಲ್ಲ ತಾಂತ್ರಿಕ ಸೌಲಭ್ಯಗಳು ವಿದ್ಯಾಸಂಸ್ಥೆಗಳಲ್ಲಿ ಇರಬೇಕು. ಡಿಜಿಟಲ್‌ನಿಂದ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ವರ್ಚುವಲ್ ಮೂಲಕ ಬೋಧನೆ ಮಾಡುವಂತೆ ಸೂಚಿಸಲಾಗಿದೆ’ ಎಂದೂ ತಿಳಿಸಿದರು.

ಭೂಮಿತಾಯಿ ಮಡಿಲು ಸೇರಿದ ಸಂಚಾರಿ ವಿಜಯ್: ಹುಟ್ಟೂರಲ್ಲಿ ಕಣ್ಣೀರ ವಿದಾಯ

ಅಕ್ಟೋಬರ್‌ನಿಂದ ಶೈಕ್ಷಣಿಕ ವರ್ಷ: ‘ಅಕ್ಟೋಬರ್ ಮೊದಲ ವಾರದಲ್ಲಿ ಈ ವರ್ಷದ ಶೈಕ್ಷಣಿಕ ವರ್ಷದ ಚಟುವಟಿಕೆ ಆರಂಭವಾಗುತ್ತವೆ. ಮೊದಲ ವರ್ಷದ ಪದವಿಗೆ ಅಕ್ಟೋಬರ್ ಮೊದಲ ವಾರದಿಂದಲೇ ದಾಖಲಾತಿ ಆರಂಭ ಮಾಡುವಂತೆ ಕುಲಪತಿಗಳಿಗೆ ತಿಳಿಸಲಾಗಿದೆ’ ಎಂದರು.

‘ಕೆಲವು ಕಡೆ ಪರೀಕ್ಷೆಗಳು ನಡೆದಿವೆ, ಇನ್ನು ಕೆಲವೆಡೆ ಆಗಿಲ್ಲ. ಈ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು. ಇನ್ನು ಈಗಾಗಲೇ ದೈನಂದಿನ ತರಗತಿಗಳು ಶುರುವಾಗಿದ್ದು, ಅವುಗಳನ್ನು ಕೂಡ ಶೈಕ್ಷಣಿಕ ವರ್ಷದ ಚಟುವಟಿಕೆ ಆಧಾರದಲ್ಲೇ ನಡೆಸಲಾಗುವುದು. ಮುಂದಿನ ವರ್ಷದ ಪರೀಕ್ಷೆಗಳನ್ನು ಹೇಗೆ ನಡೆಸಬೇಕು ಹಾಗೂ ಗುಣಮಟ್ಟದ ಶಿಕ್ಷಣ ನೀಡಲು ಏನೆಲ್ಲ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಯಿತು. ಜಾಗತಿಕ ಮಟ್ಟದಲ್ಲಿ ವಿದ್ಯಾರ್ಥಿಗಳು ಪೈಪೋಟಿ ನಡೆಸಬೇಕಾದರೆ ಕಲಿಕೆ ಮತ್ತು ಬೋಧನೆಯಲ್ಲಿ ಗುಣಮಟ್ಟ ಇರಬೇಕು ಎಂಬ ಬಗ್ಗೆಯೂ ವಿಸ್ತೃತವಾಗಿ ಸಮಾಲೋಚನೆ ನಡೆಸಲಾಯಿತು’ ಎಂದರು.

ಗರ್ಭಿಣಿಯಾಗಿದ್ದಾಗ ಮದುವೆ ಪ್ರಸ್ತಾಪವಿಟ್ಟಿದ್ದ ಗೆಳೆಯ: ನಟಿ ನೀನಾ ಆತ್ಮಚರಿತ್ರೆ

ಏಕೀಕೃತ ವಿವಿ- ಕಾಲೇಜು ನಿರ್ವಹಣಾ ವ್ಯವಸ್ಥೆ: ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳನ್ನು ಅನುಸಂಧಾನಗೊಳಿಸಿ ʼಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆʼ ಮೂಲಕ ಈ ವರ್ಷದಿಂದಲೇ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದಕ್ಕಾಗಿ ಪ್ರತ್ಯೇಕ ಡಿಜಿಟಲ್ ಪೋರ್ಟಲ್ ಸಿದ್ಧವಾಗುತ್ತಿದೆ. ಅದನ್ನು ಇ- ಆಡಳಿತ ಇಲಾಖೆ ಅಭಿವೃದ್ಧಿಪಡಿಸುತ್ತಿದೆ. ಇದೇ 25ರಿಂದ ಪ್ರಾಯೋಗಿಕವಾಗಿ ಬಳಸಲು ಸರ್ಕಾರ ಅನುಮತಿ ನೀಡಿದೆ. ಜುಲೈ 15ಕ್ಕೆ ಲೋಕಾರ್ಪಣೆ ಆಗಲಿದೆ. ದಾಖಲಾತಿಗೆ ನಿಗದಿ ಮಾಡಿರುವ ದಿನಾಂಕಕ್ಕೆ ಮೊದಲೇ ಎಲ್ಲ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಈ ಪೋರ್ಟಲ್ ಬಳಕೆಗೆ ಸಿದ್ಧವಾಗಿರಬೇಕು ಎಂದು ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.

‘ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲ ಚಟುವಟಿಕೆ ಇನ್ನು ಮುಂದೆ ಇ-ಆಫೀಸ್ ಮೂಲಕವೇ ನಡೆಯಲಿದೆ. ಕಾಗದ ಪತ್ರಗಳಿಗೆ ಅವಕಾಶ ಇಲ್ಲ’ ಎಂದೂ ಅವರು ಹೇಳಿದರು.

ಬಿಎಸ್ಸಿಗೆ ಸಿಇಟಿ ಇಲ್ಲ: ಬಿಎಸ್ಸಿಗೆ ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮೂಲಕ ಪ್ರವೇಶ ನೀಡುವ ಚಿಂತನೆಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ತಿಳಿಸಿದರು. ವಿಜ್ಞಾನ ಬೋಧನೆ ಮತ್ತು ಕಲಿಕೆಯಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಪದವಿ ವಿಜ್ಞಾನ ಪ್ರವೇಶಕ್ಕೂ ಸಿಇಟಿ ತರುವ ಯೋಚನೆ ಇತ್ತು. ಆದರೆ, ಸದ್ಯಕ್ಕೆ ಕೈಬಿಡಲಾಗಿದೆ ಎಂದರು.

ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು: ‘ಸಿಇಟಿ ಪರೀಕ್ಷೆ ಬಗ್ಗೆ ಹೈಕೋರ್ಟ್ ನೀಡಿರುವ ಸೂಚನೆ ಬಗ್ಗೆ ಇನ್ನೂ ಮಾಹಿತಿ ಇಲ್ಲ. ಪ್ರಸಕ್ತ ವರ್ಷ ಪಿಯುಸಿ ಪಾಸಾದವರೆಲ್ಲ ಸಿಇಟಿ ಬರೆಯಬಹುದು’ ಎಂದರು.

ಲಿಕ್ಕರ್ ಮಾಫಿಯಾ ಬಗ್ಗೆ ವರದಿ ಮಾಡಿದ್ದ ಪತ್ರಕರ್ತ ಸಾವು: ವರದಿ ಕೇಳಿದ ಪಿಸಿಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.