ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಲೋಕಾಯುಕ್ತ ಪೋಲೀಸರು ತನಿಖೆ ತೀವ್ರಗೊಳಿಸಿದ್ದು, ಲಂಚ ನೀಡಿದ್ದ ಅಧಿಕಾರಿಗಳ ವಿವರವನ್ನು ಕಲೆ ಹಾಕಿದ್ದಾರೆ.

‘ನಿಮ್ಮ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದ್ದು, ಹಣ ನೀಡಿದರೆ ಮುಚ್ಚಿಹಾಕುತ್ತೇವೆ ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಆಮಿಷ ಒಡ್ಡಲಾಗುತ್ತಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ನಿವೃತ್ತ ಹೆಡ್ಕಾನ್ಸ್ಟೆಬಲ್ ನಿಂಗಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.

‘ಲಂಚ ನೀಡಿರುವ ಅಧಿಕಾರಿಗಳನ್ನು ಗುರುತಿಸಿದ್ದು, ವಿಚಾರಣೆಗೆ ಕರೆಯಲು ಸಿದ್ಧತೆ ನಡೆಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

‘ಕೆಲವು ಅಧಿಕಾರಿಗಳು ಪರಸ್ಪರರ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಎಲ್ಲರನ್ನೂ ಕರೆದು ಲೋಕಾಯುಕ್ತರು ಮಾತನಾಡಿದ್ದು, ‘ಪ್ರಾಮಾಣಿಕವಾಗಿ ಕೆಲಸ ಮಾಡುವುದಿದ್ದರಷ್ಟೇ ಈ ಸಂಸ್ಥೆಯಲ್ಲಿರಿ' ಎಂದು ತಾಕೀತು ಮಾಡಿದ್ದಾರೆ. ಕೆಲ ಅಧಿಕಾರಿಗಳು ತಮ್ಮನ್ನು ಲೋಕಾಯುಕ್ತದ ಸೇವೆಯಿಂದ ಬಿಡುಗಡೆಗೊಳಿಸಿ ಎಂದು ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ’ ಎಂದು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.