ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ನಡೆಯುವ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬಸ್ ಪಾಸ್ ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದ ವರೆಗೆ ಹೋಗಬಹುದು ಮತ್ತು ವಾಸಸ್ಥಳಕ್ಕೆ ಹಿಂದಿರುಗಬಹುದಾಗಿದೆ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.