ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯದಿಂದ ಏಳು ವರ್ಷ ಶಿಕ್ಷೆಗೆ ಗುರಿಯಾದ ಗಂಗಾವತಿ ಕ್ಷೇತ್ರದ ಶಾಸಕ ಜಿ. ಜನಾರ್ದನ ರೆಡ್ಡಿ ಅವರನ್ನು ಅನರ್ಹಗೊಳಿಸಲಾಗಿದೆ.

‘ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ಮೇ 6ರಿಂದ ಅನರ್ಹ ಆದೇಶವು ಜಾರಿಗೆ ಬರಲಿದ್ದು, ಆರು ವರ್ಷಗಳವರೆಗೆ ಮುಂದುವರಿಯಲಿದೆ. ಹೀಗಾಗಿ ರಾಜ್ಯ ವಿಧಾನಸಭೆಯ ಒಂದು ಸ್ಥಾನ ಖಾಲಿಯಾಗಿದೆ’ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಸೂಚನೆ ಹೊರಡಿಸಿದ್ದಾರೆ.

ಕರ್ನಾಟಕ– ಆಂಧ್ರಪ್ರದೇಶ ಅಂತರರಾಜ್ಯ ಗಡಿ ಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ನ್ಯಾಯಾಲಯವು ರೆಡ್ಡಿ ಮತ್ತು ಇತರ ಮೂವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹10 ಸಾವಿರ ದಂಡ ವಿಧಿಸಿದೆ. ರೆಡ್ಡಿ ಅವರು ಎರಡನೇ ಅಪರಾಧಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.