ಬೆಂಗಳೂರು: ಕಬಡ್ಡಿ ಪಂದ್ಯದಲ್ಲಿ ಅನಧಿಕೃತ ಬೆಟ್ಟಿಂಗ್ ಕಟ್ಟಿ, ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ ವಿರುದ್ಧ ಕ್ರಿಮಿನಲ್ ಅಪರಾಧ ಪ್ರಕರಣ ದಾಖಲಿಸಲು ಆದೇಶಿಸಿರುವ ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸುವಂತೆ ಕೋರಿ ಪರಮೇಶ್ವರ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ಪ್ರಕರಣ: ‘ತುಮಕೂರಿನಲ್ಲಿ 2025ರ ಅಕ್ಟೋಬರ್ 19ರಂದು ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಪರಮೇಶ್ವರ ಅವರು ಅತಿಥಿಯಾಗಿ ಪಾಲ್ಗೊಂಡು ₹500 ಬೆಟ್ಟಿಂಗ್ ಕಟ್ಟುವ ಮೂಲಕ ಅಪರಾಧ ಕೃತ್ಯಗಳನ್ನು ಎಸಗಲು ಸಾರ್ವಜನಿಕವಾಗಿ ಪ್ರಚೋದನೆ ನೀಡಿದ್ದಾರೆ’ ಎಂದು ಆರೋಪಿಸಿ ಮಧುಗಿರಿ ತಾಲ್ಲೂಕಿನ ಹಂದ್ರಾಳು ಗ್ರಾಮದ ಎಚ್.ಆರ್.ನಾಗಭೂಷಣ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ದೂರಿನ ವಿಚಾರಣೆ ನಡೆಸಿದ್ದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಪರಮೇಶ್ವರ ಮತ್ತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾಧಿಕಾರಿಗೆ ಆದೇಶಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-51-1320648376

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.