ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ನಾಡು ಶಾಂತಿಯ ತೋಟ: ಡಾ.ಜಿ.ಪರಮೇಶ್ವರ

Last Updated 1 ನವೆಂಬರ್ 2018, 4:31 IST
ಅಕ್ಷರ ಗಾತ್ರ

ತುಮಕೂರು: ಕನ್ನಡ ನಾಡು ವಿವಿಧ ಧರ್ಮ ಸಂಸ್ಕೃತಿಗಳ ಸಮಾಗಮವಾಗಿದೆ. ಧರ್ಮ ಸಹಿಷ್ಣುತೆ, ಸಮನ್ವಯತೆ, ಸೌಹಾರ್ದತೆಯಿಂದ ಬದುಕುತ್ತಿರುವ ಶಾಂತಿಯ ತೋಟ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ 63ನೇ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೇರವೇರಿಸಿ ಮಾತನಾಡಿದರು. ಸುಂದರ, ರಮಣೀಯ ಸೌಹಾರ್ದಯುತ ಶ್ರೀಮಂತ ಶಾಂತಿಯ ನಾಡಿನಲ್ಲಿ ಜನಿಸಿರುವ ನಾವೇ ಧನ್ಯರು ಎಂದರು.

ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜನರ ಸಹಕಾರದೊಂದಿಗೆ ಅಭಿವೃದ್ಧಿಯ ವೇಗವನ್ನು ಇನ್ನಷ್ಟು ಚುರುಕುಗೊಳಿಸಿ ರಾಜಧಾನಿ ಬೆಂಗಳೂರು ನಗರಕ್ಕೆ ಪರ್ಯಾಯವಾಗಿ ತುಮಕೂರು ನಗರ ಮತ್ತು ಜಿಲ್ಲೆಯನ್ನು ನಿರ್ಮಾಣ ಮಾಡುವುದು ನಮ್ಮ ಆಶಯವಾಗಿದೆ ಎಂದು ತಿಳಿಸಿದರು.

ತುಮಕೂರು ಜಿಲ್ಲೆಯು ಶಾಂತಿ, ಸೌಹಾರ್ದತೆಯ ನೆಲೆವೀಡು. ಸೌಹಾರ್ದತೆಯಿಂದ ಜಿಲ್ಲೆಯ ಪ್ರಗತಿಗೆ ನಮ್ಮ ಹಿರಿಯರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಗುತ್ತಿರುವುದು ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ ಎಂದರು.

ಸಂಸದ ಎಸ್.ಪಿ. ಮುದ್ದಹನುಮೇಗೌಡ, ಶಾಸಕ ಜಿ.ಬಿ. ಜ್ಯೋತಿಗಣೇಶ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT