ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗಾಂಧೀಜಿ ಕುರಿತು ವಿಚಾರ ಸಂಕಿರಣ 24ರಿಂದ: ಎಚ್.ಕೆ. ಪಾಟೀಲ

Published 21 ಆಗಸ್ಟ್ 2024, 15:55 IST
Last Updated 21 ಆಗಸ್ಟ್ 2024, 15:55 IST
ಅಕ್ಷರ ಗಾತ್ರ

ಬೆಂಗಳೂರು: ‘ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಕರಣೆ ಅಂಗವಾಗಿ ನಗರದ ಗಾಂಧಿ ಭವನದಲ್ಲಿ ಇದೇ 24 ಮತ್ತು 25ರಂದು ‘21ನೇ ಶತಮಾನಕ್ಕೆ ಮಹಾತ್ಮ ಗಾಂಧೀಜಿ’ ವಿಷಯದ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭವಿಷ್ಯದ ಶಾಂತಿ, ನ್ಯಾಯ, ಸೋದರತ್ವ ಮತ್ತು ಸುಸ್ಥಿರ ಅಭಿವೃದ್ಧಿಯ ನಿರ್ಮಾಣ’ ಈ ವಿಚಾರ ಸಂಕಿರಣದ ಮುಖ್ಯ ವಿಷಯವಾಗಿದೆ. ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಮತ್ತು ಆಚರಣೆಗಳನ್ನು ಕೇಂದ್ರೀಕರಿಸಿದರೂ, ಈ ಕಾರ್ಯಕ್ರಮವು ಭಿನ್ನ ವಿಚಾರಗಳು, ದೃಷ್ಟಿಕೋನಗಳು ಮತ್ತು ಗಂಭೀರ ಚರ್ಚೆಗಳಿಗೆ ವಿಶಾಲ ವೇದಿಕೆ ಕಲ್ಪಿಸಲಿದೆ’ ಎಂದರು.

‘ವಿಚಾರ ಸಂಕಿರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಮಾಜಿ ಲೋಕಾಯುಕ್ತ ನ್ಯಾ. ಸಂತೋಷ್‌ ಹೆಗ್ಡೆ ಸಮಾರೋಪ ಭಾಷಣ ಮಾಡಲಿದ್ದಾರೆ. ಒಟ್ಟು 27 ಮಂದಿ ವಿಚಾರ ಮಂಡಿಸಲಿದ್ದು, ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್‌ ಗಾಂಧಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಕುಮಾರ್‌ ಪ್ರಶಾಂತ್, ದಿಕ್ಸೂಚಿ ಭಾಷಣ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಅಮೆರಿಕ, ಬಾಂಗ್ಲಾದೇಶ, ಚೀನಾ, ದಕ್ಷಿಣ ಕೊರಿಯಾ ದೇಶಗಳಿಂದ ವಿಷಯ ಪಂಡಿತರು ಭಾಗವಹಿಸಲಿದ್ದಾರೆ. ಬೆಂಗಳೂರಿನಲ್ಲಿ ಓದುತ್ತಿರುವ ವಿವಿಧ ದೇಶಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ಹೆಚ್ಚಿನ ವಿವರಗಳಿಗೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷ ಎನ್‌.ಆರ್‌. ವಿಶುಕುಮಾರ್‌ (ಮೊಬೈಲ್‌–990009532) ಅವರನ್ನು ಸಂಪರ್ಕಿಸಬಹುದು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT