ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿ.ಬಿ. ಶಿವರಾಜುಗೆ ಗಾಂಧಿ ಸೇವಾ ಪ್ರಶಸ್ತಿ

Published : 26 ಸೆಪ್ಟೆಂಬರ್ 2024, 16:23 IST
Last Updated : 26 ಸೆಪ್ಟೆಂಬರ್ 2024, 16:23 IST
ಫಾಲೋ ಮಾಡಿ
Comments

ಬೆಂಗಳೂರು: ತುಮಕೂರು ಜಿಲ್ಲೆ ತುರುವೇಕೆರೆ ತಾಲ್ಲೂಕು ಗೊಟ್ಟಿಕೆರೆಯ ಗಾಂಧಿವಾದಿ ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿಶಾಲೆಯನ್ನು ಮಹಾತ್ಮ ‘ಗಾಂಧಿ ಸೇವಾ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವ, ಆದರ್ಶಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿದ ವ್ಯಕ್ತಿಗಳು ಹಾಗೂ ಸಂಘ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ₹5 ಲಕ್ಷ ನಗದು ಒಳಗೊಂಡ ಈ ಪ್ರಶಸ್ತಿಯನ್ನು ನೀಡುತ್ತಿದೆ.

ಕರ್ನಾಟಕ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ಆಯ್ಕೆ ಮಾಡಿದ್ದು, ಅ.2ರ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT