ಬೆಂಗಳೂರು: ಅಡುಗೆ ಅನಿಲ ಪೂರೈಕೆ ಸೇವೆಯಲ್ಲಿ ಯಾವುದೇ ವ್ಯತ್ಯಯವಾಗದೆ, ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆ ಕಾರ್ಯ ಸುಗಮವಾಗಿ ನಡೆಯುತ್ತಿದ್ದು ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಗ್ಯಾಸ್ ವಿತರಕ ಕಂಪನಿಗಳು ಪ್ರಕಟಣೆಯಲ್ಲಿ ತಿಳಿಸಿವೆ.

ದೇಶದಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುವ ಭೀತಿಯ ಹಿನ್ನೆಲೆಯಲ್ಲಿ ಏ.14ವರೆಗೂ ದೇಶವನ್ನು ಲಾಕ್‌ಡೌನ್ ಮಾಡಲಾಗಿದ್ದರೂ ಅಡುಗೆ ಅನಿಲ ಪೂರೈಕೆಯಲ್ಲಿ ತೊಂದರೆಉಂಟಾಗುವುದಿಲ್ಲ ಎಂದು ವಿತರಣಾ ಕಂಪನಿಗಳು ತಿಳಿಸಿವೆ.

ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಪಿಸಿ, ಮತ್ತು ಎಚ್ಪಿಸಿಗಳು ರಾಜ್ಯದಲ್ಲಿ ದಿನವಿಡೀ ಅಡುಗೆ ಅನಿಲ ಪೂರೈಕೆಗೆ ಕ್ರಮ ಕೈಗೊಂಡಿದ್ದು ವಿತರಣೆ ಕಾರ್ಯಗಳು ಸುಗಮವಾಗಿ ನಡೆಯುತ್ತಿವೆ ಎಂದು ಅನಿಲ ವಿತರಣೆ ಕಂಪನಿಗಳ ಉಪ ಮಹಾ ಪ್ರಬಂಧಕ ನೂರಾನ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಕಷ್ಟು ಪ್ರಮಾಣದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ದಾಸ್ತಾನು ಇದ್ದು, ಯಾವುದೇ ತುರ್ತು ಸಂದರ್ಭದಲ್ಲೂ ಸಾರ್ವಜನಿಕರ ಬೇಡಿಕೆ ಪೂರೈಸಲು ಕಂಪನಿಗಳು ಸಜ್ಜಾಗಿವೆ. ರಾಜ್ಯ ಸರ್ಕಾರ ಸಹ ಗ್ಯಾಸ್ ಸಿಲಿಂಡರ್ ವಿತರಣೆ ಮಾಡುವುದಕ್ಕೆ ವಿಶೇಷ ಅವಕಾಶ ಕಲ್ಪಿಸಿದೆ. ಅಡುಗೆಅನಿಲದ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕರುತಮ್ಮ ಅಗತ್ಯಕ್ಕೆ ಅನುಸಾರವಾಗಿ ಗ್ಯಾಸ್ ಬುಕ್ ಮಾಡುವಂತೆ ಅವರು ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.